ಬೆಂಗಳೂರು: ಯಾದಗಿರಿ ಪಿಎಸ್ಐ ಪರಶುರಾಮ್ ಅವರ ಅನುಮಾನಾಸ್ಪದ ಸಾವಿನ ಬಳಿಕ ಕಾಂಗ್ರೆಸ್ ಶಾಸಕ ಚನ್ನಾರೆಡ್ಡಿ ಹಾಗೂ ಪುತ್ರನ ವಿರುದ್ಧ ದೂರು, ಎಫ್ಐಆರ್ ದಾಖಲಾಗಿತ್ತು. ಈ ನಂತ್ರ ನಾಪತ್ತೆಯಾಗಿದ್ದಂತ ಅವರು ಇದೀಗ ಸಿಎಂ ಸಿದ್ಧರಾಮಯ್ಯ ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಪ್ರತ್ಯಕ್ಷರಾಗಿದ್ದಾರೆ.
ಇಂದು ಬೆಂಗಳೂರಿನ ಸಿಎಂ ಸಿದ್ಧರಾಮಯ್ಯ ಅವರ ಕಾವೇರಿ ನಿವಾಸಕ್ಕೆ ಭೇಟಿ ನೀಡಿದಂತ ಕಾಂಗ್ರೆಸ್ ಶಾಸಕ ಚನ್ನಾರೆಡ್ಡಿ ಅವರು, ಸಿಎಂ ಹಾಗೂ ಗೃಹ ಸಚಿವ ಡಾ.ಜಿ ಪರಮೇಶ್ವರ್ ಜೊತೆಗೆ ತಮ್ಮ ವಿರುದ್ಧ ದಾಖಲಾಗಿರುವಂತ ಎಫ್ಐಆರ್ ಕುರಿತಂತೆ ಚರ್ಚಿಸಿದರು ಎನ್ನಲಾಗಿದೆ.
ಯಾದಗಿರಿ ಪಿಎಸ್ಐ ಪರಶುರಾಮ ನಿಗೂಢ ಸಾವಿನ ಬಳಿಕ ಕಾಂಗ್ರೆಸ್ ಶಾಸಕ ಚನ್ನಾರೆಡ್ಡಿ ಅವರು ನಾಪತ್ತೆಯಾಗಿದ್ದರು. ಈಗ ಸಿಎಂ, ಗೃಹ ಸಚಿವರ ಎದುರಲ್ಲೇ ಅವರು ಪ್ರತ್ಯಕ್ಷರಾಗಿದ್ದು ಹಲವು ಕುತೂಹಲಕ್ಕೆ ಕಾರಣವಾಗಿದೆ. ಅಲ್ಲದೇ ಅವರ ವಿರುದ್ಧ ದಾಖಲಾಗಿರುವಂತ ಪ್ರಕರಣ ಸಂಬಂಧದಲ್ಲಿ ಬಂಧನಕ್ಕೆ ಒಳಗಾಗುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.
ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆವರೆಗೂ ಹೋರಾಟದ ಕಿಚ್ಚು ಆರುವುದಿಲ್ಲ: ಬಿವೈ ವಿಜಯೇಂದ್ರ