ಬೀದರ್ : ನಾಪತ್ತೆಯಾಗಿದ್ದ ಯುವತಿಯು ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗುಣತೀರ್ಥವಾಡಿ ಎಂಬ ಗ್ರಾಮದಲ್ಲಿ ನಡೆದಿದೆ.
ಹೌದು ಬೀದರ್ ನಲ್ಲಿ ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆಯಾಗಿದ್ದಾಳೆ. ಗುಣತೀರ್ಥವಾಡಿ ಗ್ರಾಮದ ಬಳಿ ನಿನ್ನೆ ಯುವತಿಯ ಶವ ಪತ್ತೆಯಾಗಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗ್ರಾಮದ ಯುವತಿ ಎಂದು ಹೇಳಲಾಗುತ್ತಿದ್ದು, ರೇಪ್ ಮಾಡಿ ಕೊಲೆ ಮಾಡಿದ್ದಾರೆ ಎಂದು ಪಾಲಕರು ಆರೋಪಿಸುತ್ತಿದ್ದಾರೆ.
ಇನ್ನು ಹಲವಾರು ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ನಮಗೆ ನ್ಯಾಯ ಬೇಕು ಎಂದು ಧರಣಿ ನಡೆಸುತ್ತಿದ್ದಾರೆ. ಘಟನೆ ಕುರಿತಂತೆ ಬಸವಕಲ್ಯಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸ್ ಸರು ತನಿಖೆಯನ್ನು ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.