ಬೆಂಗಳೂರು : ವಿಧಾನ ಪರಿಷತ್ ಉಪ ಸಭಾಪತಿ ಆಯ್ಕೆಗೆ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಡಿಸೆಂಬರ್ 23ರಂದು ವಿಧಾನ ಪರಿಷತ್ ಉಪ ಸಭಾಪತಿ ಆಯ್ಕೆಗೆ ಚುನಾವಣೆ ನಡೆಯಲಿದೆ.
ಡಿ.23 ಕ್ಕೆ ಉಪಸಭಾಪತಿ ಚುನಾವಣೆ ಹಿನ್ನೆಲೆ ನಾಳೆ ಎಂ.ಕೆ ಪ್ರಾಣೇಶ್ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ.ಡಿಸೆಂಬರ್ 23ರಂದು ವಿಧಾನ ಪರಿಷತ್ ಉಪ ಸಭಾಪತಿ ಆಯ್ಕೆಗೆ ಚುನಾವಣೆ ನಡೆಯಲಿದ್ದು, . ನಾಳೆ ಮಧ್ಯಾಹ್ನ 12ಗಂಟೆಯ ತನಕ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಲು ಅವಕಾಶವಿದೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ 10 ದಿನಗಳ ಕಾಲದ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಈ ಕಲಾಪದಲ್ಲಿಯೇ ನೂತನ ಉಪ ಸಭಾಪತಿಗಳ ಆಯ್ಕೆ ನಡೆಯಲಿದೆ.
ಇನ್ನೂ,ವಿಧಾನ ಪಷತ್ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಆಯ್ಕೆಯಾಗಿದ್ದಾರೆ. ಸ್ವಾತಂತ್ರ್ಯ ನಂತರ ಕರ್ನಾಟಕ ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರದ ಅಪಾರ ಅಭಿವೃದ್ಧಿಯಲ್ಲಿ ಶ್ರೀ ಬಸವರಾಜ ಹೊರಟ್ಟಿಯವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬಿಬಿಎಂಟಿಸಿ ಟಿಕೆಟ್ ರಹಿತ ಪ್ರಯಾಣಿಕರಿಂದ 6,32,030, ಲಕ್ಷ ದಂಡ ವಸೂಲಿ
BREAKING NEWS : ವಿಶ್ವವಿಖ್ಯಾತ ಗೋಲಗುಮ್ಮಟದಿಂದ ಹಾರಿ ಯುವತಿ ಆತ್ಮಹತ್ಯೆ