ಬೆಳಗಾವಿ : ವಿಧಾನ ಪರಿಷತ್ ಉಪ ಸಭಾಪತಿ ಆಯ್ಕೆಗೆ ಇಂದು ಚುನಾವಣೆ ನಡೆದಿದ್ದು, ಉಪ ಸಭಾಪತಿಯಾಗಿ ಎಂ.ಕೆ ಪ್ರಾಣೇಶ್ (M.K Pranesh) ಆಯ್ಕೆಯಾಗಿದ್ದಾರೆ.
ಇಂದು (ಡಿಸೆಂಬರ್ 23) ರಂದು 11 ಗಂಟೆಗೆ ವಿಧಾನ ಪರಿಷತ್ ಉಪ ಸಭಾಪತಿ ಆಯ್ಕೆಗೆ ಚುನಾವಣೆ ನಡೆದಿದ್ದು, ಎಂ,ಕೆ ಪ್ರಾಣೇಶ್ ನಾಮಪತ್ರ ಸಲ್ಲಿಸಿದ್ದರು. 39 ಮತ ಪಡೆಯುವ ಮೂಲಕ ಸಭಾಪತಿಯಾಗಿ ಎಂ,ಕೆ ಪ್ರಾಣೇಶ್ ಆಯ್ಕೆಯಾಗಿದ್ದಾರೆ.
ಇನ್ನೂ, ಕಾಂಗ್ರೆಸ್ ನ ಅರವಿಂದ ಅರಳಿ 26 ಮತ ಪಡೆದಿದ್ದರೆ, ಕೂಡ ಉಪ ಸಭಾಪತಿ ಸ್ಥಾನದ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದರು. ಜೆಡಿಎಸ್ ಯಾರೊಬ್ಬರೂ ಕೂಡ ಮತ ಚಲಾಯಿಸಿರಲಿಲ್ಲ. (ಡಿಸೆಂಬರ್ 23) ಇಂದು ವಿಧಾನ ಪರಿಷತ್ ಉಪ ಸಭಾಪತಿ ಆಯ್ಕೆಗೆ ಚುನಾವಣೆ ನಡೆದಿದ್ದು, ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ 10 ದಿನಗಳ ಕಾಲದ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಈ ಕಲಾಪದಲ್ಲಿಯೇ ನೂತನ ಉಪ ಸಭಾಪತಿಗಳ ಆಯ್ಕೆ ನಡೆದಿದೆ.
BIGG NEWS : ಬಿಎಂಟಿಸಿ ಪ್ರಯಾಣಿಕರಿಗೆ ಕೋವಿಡ್ ಟಫ್ ರೂಲ್ಸ್..! ಮಾಸ್ಕ್ ಧರಿಸಿದ್ರೆ ಮಾತ್ರ ಸಂಚಾರಕ್ಕೆ ಅವಕಾಶ