ಶಿವಮೊಗ್ಗ: ರಾಜ್ಯ ಕಾಂಗ್ರೆಸ್ ಸರ್ಕಾರ 3 ರೂ ತೈಲ ಬೆಲೆ ಏರಿಕೆ ಮಾಡಿದ್ದಕ್ಕೆ ಬೊಬ್ಬೆ ಹೊಡೆದುಕೊಳ್ಳುತ್ತಿದ್ದಾರೆ. ಬಿಜೆಪಿ ಸರ್ಕಾರ ಅವಧಿಯಲ್ಲಿ ರೂ.90 ಏರಿಕೆ ಕಂಡಾಗ ಏಕೆ ಮಾತನಾಡಲಿಲ್ಲ ಅಂತ ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶ್ನಿಸಿದರು. ಅಲ್ಲದೇ ಕಾಂಗ್ರೆಸ್ ಸರ್ಕಾರದಿಂದ ರಾಜ್ಯದಲ್ಲಿ ತೈಲ ಬೆಲೆ ಏರಿಕೆ ಮಾಡಿರುವುದನ್ನು ಅವರು ಸಮರ್ಥಿಸಿಕೊಂಡರು.
ಸಾಗರ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಹಣ ಕ್ರೂಢೀಕರಣದ ಸಲುವಾಗಿ ತೈಲ ಬೆಲೆ ಏರಿಕೆ ಮಾಡಲಾಗಿದೆ. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಾಣಿಕೆ ಮಾಡೋದಕ್ಕೆ ಅಲ್ಲ. ಗ್ಯಾರಂಟಿ ಯೋಜನೆಗಳಿಗೆ ಹಣದ ಕೊರತೆಯೂ ಇಲ್ಲ ಎಂಬುದಾಗಿ ಹೇಳಿದರು.
ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ 60 ರೂ ಇದ್ದಂತ ತೈಲಬೆಲೆ ರೂ.90ಕ್ಕೆ ಏರಿಕೆಯಾಗಿತ್ತು. ಆಗ ಯಾರೂ ಮಾತನಾಡಲಿಲ್ಲ. ಈಗ ಕೇವಲ 3 ರೂ ಏರಿಕೆ ಮಾಡಿದ ತಕ್ಷಣ ಬೊಬ್ಬೆ ಹೊಡೆದುಕೊಳ್ಳುತ್ತಿದ್ದಾರೆ. ಆಗ ಯಾಕೆ ಮಾತನಾಡಲಿಲ್ಲ ಅಂತ ಪ್ರಶ್ನಿಸಿದರು.
ತೈಲ ಬೆಲೆ ಏರಿಕೆಯ ಹಿಂದೆ ಗ್ಯಾರಂಟಿ ಯೋಜನೆಗೆ ಹಣ ಹೊಂದಾಣಿಕೆಯ ಉದ್ದೇಶವಿಲ್ಲ. ರಾಜ್ಯದ ಇತರೆ ಅಭಿವೃದ್ಧಿ ಕಾರ್ಯಗಳಿಗೆ ಹಣವನ್ನು ಸರಿದೂಗಿಸುವ ನಿಟ್ಟಿನಲ್ಲಿ ಈ ಕ್ರಮವಹಿಸಲಾಗಿದೆ ಅಂತ ತೈಲ ಬೆಲೆ ಏರಿಕೆಯನ್ನು ಶಾಸಕ ಬೇಳೂರು ಗೋಪಾಲಕೃಷ್ಣ ಸಮರ್ಥಿಸಿಕೊಂಡರು.
ವರದಿ: ವಸಂತ ಬಿ ಈಶ್ವರಗೆರೆ
ವಿಜಯಪುರದಲ್ಲಿ ಘೋರ ದುರಂತ: ಜಮೀನಿನಲ್ಲಿ ನೀರು ತುಂಬಿದ್ದ ಗುಂಡಿಗೆ ಬಿದ್ದು ಮೂವರು ಸಾವು
ಸಾಗರದಲ್ಲಿ ‘ಡೆಂಗ್ಯೂ’ ನಿಯಂತ್ರಣಕ್ಕೆ ಈ ಖಡಕ್ ಸೂಚನೆ ಕೊಟ್ಟ ‘ಶಾಸಕ ಬೇಳೂರು ಗೋಪಾಲಕೃಷ್ಣ’