ಶಿವಮೊಗ್ಗ: ಕನ್ನಡ ಹಿರಿಯ ಸಾಹಿತಿ ನಾ.ಡಿಸೋಜ ಅವರ ನಿಧನಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವಂತ ಅವರು ನಾ.ಡಿಸೋಜ ಅವರದು ಬದುಕು ಬೇರೆಯಲ್ಲ, ಬರಹ ಬೇರೆಯಲ್ಲ. ಎರಡೂ ಒಂದೇ. ಬರೆದಂತೆ ಬದುಕಿದವರು. ಬದುಕಿದಂತೆ ಬರೆದವರು ಎಂದಿದ್ದಾರೆ.
ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನಾ.ಡಿಸೋಜ ಅವರ ಕೊಡುಗೆ ಅನನ್ಯವಾದದ್ದು. ಶ್ರೀಯುತರ ಅಗಲಿಕೆಯಿಂದ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಕುಟುಂಬಸ್ತರಿಗೆ ಹಾಗೂ ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿ ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಸಂತಾಪ ಸೂಚಿಸಿದ್ದಾರೆ.