ಶಿವಮೊಗ್ಗ : ಎಲೆಚುಕ್ಕೆ ಮತ್ತು ಹಳದಿ ಎಲೆ ರೋಗದಿಂದ ಫಸಲು ಕಳೆದುಕೊಂಡಿರುವ ಬೆಳೆಗಾರರಿಗೆ ಪರಿಹಾರ ನೀಡುವಂತೆ ಸದನದಲ್ಲಿ ಗಟ್ಟಿಯಾಗಿ ಸರ್ಕಾರವನ್ನು ಒತ್ತಾಯಿಸಲಾಗುತ್ತದೆ. ಅಡಿಕೆ ಬೆಳೆಗಾರರು ತೀವೃ ಸಂಕಷ್ಟದಲ್ಲಿದ್ದು, ಅಡಿಕೆ ಬೆಳೆಯುವ ಪ್ರದೇಶದಿಂದ ಬಂದ ಶಾಸಕರು ಒಟ್ಟಾಗಿ ಸರ್ಕಾರದ ಮೇಲೆ ಪರಿಹಾರಧನ ಬಿಡುಗಡೆಗೆ ಒತ್ತಡ ತರುತ್ತೇವೆ ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇದರ ಜೊತೆಗೆ ಹವಮಾನ ಆಧಾರಿತ ಬೆಳೆವಿಮೆ ಬಿಡುಗಡೆಗೂ ಸಹ ಸರ್ಕಾರಕ್ಕೆ, ಸಂಬAಧಪಟ್ಟ ಸಚಿವರಿಗೆ ಮನವಿ ಮಾಡಲಾಗಿದ್ದು, ಶೀಘ್ರ ಪರಿಹಾರಧನ ಬಿಡುಗಡೆಯಾಗುತ್ತದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಅಧಿಕಾರ ಹಂಚಿಕೆ ಗೊಂದಲ ಶೀಘ್ರದಲ್ಲಿಯೆ ಬಗೆಹರಿಸಲು ನಾವು ಮನವಿ ಮಾಡಿದ್ದೇವೆ. ಮುಖ್ಯಮಂತ್ರಿಗಳು ವಿಧಾನಸೌಧದಲ್ಲಿ ನನ್ನ ಹತ್ತಿರ ಸಹಜವಾಗಿ ಕೆಲವೊಂದು ವಿಷಯಗಳನ್ನು ಚರ್ಚೆ ಮಾಡಿದ್ದು, ಕೆಲವು ಮಾಧ್ಯಮದಲ್ಲಿ ಬಂದಿತ್ತು. ಅದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ನಗರವ್ಯಾಪ್ತಿಯಲ್ಲಿ ನಡೆಯುತ್ತಿರುವ ಒಳಚರಂಡಿ ಕಾಮಗಾರಿಗೆ ನಾನು ಮೊದಲ ಬಾರಿ ಶಾಸಕನಾಗಿದ್ದಾಗ 70 ಕೋಟಿ ಬಿಡುಗಡೆ ಮಾಡಿದ್ದೇ. ಈಗ ಮತ್ತೆ 34 ಕೋಟಿ ರೂ. ಮಂಜೂರು ಮಾಡಿಸಿದ್ದು ಶೀಘ್ರದಲ್ಲಿಯೆ ಕಾಮಗಾರಿ ಪ್ರಾರಂಭಗೊಳ್ಳಲಿದೆ ಎಂದರು.
ಡಿ.23, 24ರಂದು ಸಾಗರದ ‘ಪದವಿ ಪೂರ್ವ ಕಾಲೇಜು ಸುವರ್ಣ ಮಹೋತ್ಸವ’ ಆಚರಣೆ: ಶಾಸಕ ಗೋಪಾಲಕೃಷ್ಣ ಬೇಳೂರು
ಕಾರ್ಮಿಕರ ಮಕ್ಕಳು ಉನ್ನತ ಸ್ಥಾನಕ್ಕೆ ಹೋಗಬೇಕು: ಶಾಸಕ ಗೋಪಾಲಕೃಷ್ಣ ಬೇಳೂರು
ನಾನು, ಸತೀಶ್ ಜಾರಕಿಹೊಳಿ ಭೇಟಿಯಾಗಿದ್ದು ನಿಜ: ಡಿಸಿಎಂ ಡಿ.ಕೆ. ಶಿವಕುಮಾರ್








