ಬೆಂಗಳೂರು: ರಾಜ್ಯ ಸರ್ಕಾರದಿಂದ ಈಗಾಗಲೇ ಹಲವು ನಿಗಮಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿದೆ. ಇದೀಗ ಶಾಸಕ ಗೂಳಿಹಟ್ಟಿ ಶೇಖರ್ ( MLA Gulihatti Shekar ) ಅವರನ್ನು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮಕ್ಕೆ ( Karnataka Bhovi Development Corporation ) ಅಧ್ಯಕ್ಷರನ್ನಾಗಿ ನೇಮಿಸಿದೆ.
BIG BREAKING NEWS: ವಾಟ್ಸಪ್ ಇಂಡಿಯಾದ ಮುಖ್ಯಸ್ಥ ಅಭಿಜಿತ್ ಬೋಸ್ ರಾಜೀನಾಮೆ | Abhijit Bose steps down
ಈ ಕುರಿತಂತೆ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿರುವಂತ ಪ್ರತಿ ಕನ್ನಡ ನ್ಯೂಸ್ ನೌಗೆ ಲಭ್ಯವಾಗಿದೆ. ಆ ಆದೇಶದಲ್ಲಿ ಹೊಸದುರ್ಗ ವಿಧಾನಸಭಾ ಕ್ಷೇತ್ರದ ಶಾಸಕರಾದಂತ ಗೂಳಿಹಟ್ಟಿ ಡಿ ಶೇಖರ್ ಅವರನ್ನು ಈ ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಿರೋದಾಗಿ ತಿಳಿಸಿದ್ದಾರೆ.
ಸಿದ್ದರಾಮಯ್ಯ ಮೊದಲು ಡಿ.ಕೆ.ಶಿವಕುಮಾರ್ ಬೆಂಬಲ ಪಡೆಯಲಿ – ಸಿಎಂ ಬಸವರಾಜ ಬೊಮ್ಮಾಯಿ
ಇನ್ನೂ ಈ ನೇಮಕಾತಿಯೂ ಮುಖ್ಯಮಂತ್ರಿಯವರಿಂದ ಅನುಮೋದಿಸಲ್ಪಟ್ಟಿದೆ. ಈ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೂ ಶಾಸಕ ಗೂಳಿಹಟ್ಟಿ ಡಿ ಶೇಖರ್ ಅವರನ್ನು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.