ಮೈಸೂರು : ಗಂಗಾವತಿ ಶಾಸಕ ಜನಾರ್ದನ ರೆಡ್ಡಿಯದ್ದು ಗೂಂಡಾ ಸಂಸ್ಕೃತಿ ಆತನಿಗೆ ಯಾವುದೇ ಸಂಸ್ಕಾರ ಇಲ್ಲ ಎಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜನಾರ್ಧನ ರೆಡ್ಡಿ ವಿರುದ್ಧ ವಾಗ್ದಾಳಿ ನಡೆಸಿದರು.
ಮೈಸೂರು ಏರ್ಪೋರ್ಟ್ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಿಪಬ್ಲಿಕ್ ಆಫ್ ಬಳ್ಳಾರಿ ಮಾಡಿದ್ದು ಶಾಸಕ ಜನಾರ್ದನ ರೆಡ್ಡಿ, ನಾನು ವಿಪಕ್ಷ ನಾಯಕನಾಗಿದ್ದಾಗ ಪ್ರಚಾರಕ್ಕೆ ಜಾಗ ಕೊಡಲಿಲ್ಲ. ಕೊನೆಗೆ ಕುರುಬರ ದೇಗುಲದಲ್ಲಿ ನಿಂತು ಪ್ರಚಾರ ಮಾಡಿ ಬಂದೆ. ಇಂತಹ ಜನಾರ್ಧನ ರೆಡ್ಡಿ ನಮಗೇನು ಪಾಠ ಮಾಡುತ್ತಾರೆ? ಎಂದು ರೆಡ್ಡಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.








