ಕಲಬುರ್ಗಿ : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಂಸದನಂದ್ ಕುಮಾರ್ ಹೆಗಡೆ ಅವರು ಏಕವಚನದಲ್ಲಿ ವಾಗ್ದಾಳಿ ನಡೆಸಿರುವುದರ ವಿಚಾರಕ್ಕೆ ಸಂಬಂಧಿಸಿದಂತೆ ಕಲಬುರ್ಗಿಯ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸಹವದಿ ಪ್ರತಿಕ್ರಿಯೆ ನೀಡಿ ಈ ರೀತಿ ಹೇಳಿಕೆಗಳಿಂದ ಅವರ ಬೆಲೆ ಕಡಿಮೆಯಾಗುತ್ತದೆ ಎಂದು ತಿರುಗೇಟು ನೀಡಿದರು.
ಕಲಬುರ್ಗಿಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿಎಂ ವಿರುದ್ಧ ಅನಂತ್ ಕುಮಾರ್ ಹೆಗಡೆ ಏಕವಚನದಲ್ಲಿ ವಾಗ್ದಾಳಿ ವಿಚಾರವಾಗಿ ಮಾತನಾಡಿದ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ, ಈ ರೀತಿಯ ಹೇಳಿಕೆಗಳಿಂದಲೇ ನಿಮ್ಮ ಬೆಲೆ ಕಡಿಮೆಯಾಗುತ್ತದೆ. ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ 5 ವರ್ಷ ನಾಪತ್ತೆಯಾಗಿದ್ದರು ಎಂದು ವಾಗ್ದಾಳಿ ನಡೆಸಿದರು.
ಕ್ಷೇತ್ರದ ಜನರನ್ನು ಸಂಸದ ಅನಂತ್ ಕುಮಾರ್ ಹೆಗಡೆ ಭೇಟಿಯಾಗಿಲ್ಲ. ಈಗ ಟಿಕೆಟ್ ಪಡೆಯಲು ಹೆಗಡೆ ವಿವಾದಾತ್ಮಕ ಹೇಳಿಕೆ ನೀಡುತ್ತಿದ್ದಾರೆ. ಈ ರೀತಿಯ ಹೇಳಿಕೆಗಳಿಂದ ಅವರ ಬೆಲೆ ಕಡಿಮೆಯಾಗುತ್ತದೆ ಎಂಬ ಸಾಮಾನ್ಯ ಜ್ಞಾನ ಕೂಡ ಅವರಿಗೆ ಇಲ್ಲ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಎಂಪಿ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆದ್ದರೆ 5 ವರ್ಷ ಸಿದ್ದರಾಮಯ್ಯ ಸಿಎಂ ಇದು ಯತೀಂದ್ರ ಸಿದ್ದರಾಮಯ್ಯ ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ಹೈಕಮಾಂಡ್ ಮನಸ್ಸು ಮಾಡಿದರೆ ಇನ್ನೂ ಐದು ವರ್ಷ ಸಿಎಂ ಆಗಬಹುದು ಸಿಎಂ ಸ್ಥಾನದ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಐದು ವರ್ಷಾನೋ ಅಥವಾ ಎರಡು ವರ್ಷನೋ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ತಿಳಿಸಿದರು.