ದಾವಣಗೆರೆ: ಹೊನ್ನಾಳಿಯ ಶಾಸಕ ಎಂ.ಪಿ ರೇಣುಕಾಚಾರ್ಯ ( MLA MP Renukacharya ) ಅವರ ಸಹೋದರನ ಪುತ್ರ ನಾಪತ್ತೆಯಾಗಿರೋದಾಗಿ ತಿಳಿದು ಬಂದಿದೆ. ಈ ಸಂಬಂಧ ದೂರು ದಾಖಲಿಸಿಕೊಂಡಿರುವಂತ ದಾವಣಗೆರೆ ಪೊಲೀಸರು, ಪತ್ತೆ ಕಾರ್ಯವನ್ನು ನಡೆಸುತ್ತಿದ್ದಾರೆ.
ತುಮಕೂರಿನಲ್ಲಿ ಪೊಲೀಸ್ ಆಕಾಂಕ್ಷಿ ಮೇಲೆ ‘DySP’ ಹಲ್ಲೆ : ಕಠಿಣ ಕ್ರಮಕ್ಕೆ ಕಾಂಗ್ರೆಸ್ ಆಗ್ರಹ
ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯಅವರ ಸಹೋದರನ ಪುತ್ರ ಚಂದ್ರಶೇಖರ್ ಕಾಣೆಯಾಗಿದ್ದು, ಕುಟುಂಬದಲ್ಲಿ ಆತಂಕ ಮನೆ ಮಾಡಿದೆ. ಶಾಸಕ ರೇಣುಕಾಚಾರ್ಯ ಅವರ ಸಹೋದರ ಪ್ರಥಮ ದರ್ಜೆ ಗುತ್ತಿಗೆದಾರ ಎಂ.ಪಿ. ರಮೇಶ್ ಅವರ ಪುತ್ರ ಚಂದ್ರಶೇಖರ್ ಭಾನುವಾರದಿಂದ ನಾಪತ್ತೆಯಾಗಿದ್ದು, ಪೊಲೀಸರಿಂದ ಶೋಧ ಕಾರ್ಯ ಆರಂಭವಾಗಿದೆ.
BREAKING: ಜೆಡಿಎಸ್ ಪಂಚರತ್ನ ರಥಯಾತ್ರೆ ಒಂದು ವಾರ ಮುಂದಕ್ಕೆ – ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ
ಪ್ರಕರಣದ ಕುರಿತು ಶಾಸಕ ‘ರೇಣುಕಾಚಾರ್ಯ’ ಹೇಳಿದ್ದೇನು..?
ಸಹೋದರನ ಪುತ್ರ ಚಂದ್ರಶೇಖರ್ ನಾಪತ್ತೆಯಾಗಿದ್ದಾರೆ, ಅ.30 ರಂದು ಕಾಣೆಯಾಗಿದ್ದು, ಅಂದು ರಾತ್ರಿ ಶಿವಮೊಗ್ಗದಲ್ಲಿ ಚಂದ್ರಶೇಖರ್ ಕಾರು ಪಾಸ್ ಆಗಿದೆ. ಅ.31 ಬೆಳಗ್ಗೆ 6.48 ಕ್ಕೆ ಸಿಗ್ನಲ್ ಕೊನೆಯಾಗಿದೆ. ದಾವಣಗೆರೆ , ಚಿತ್ರದುರ್ಗ, ಶಿವಮೊಗ್ಗ ಸೇರಿ ಎಲ್ಲಾ ಕಡೆ ಹುಡುಕಾಟ ನಡೆಸಲಾಗಿದೆ. ಇದುವರೆಗೆ ಚಂದ್ರಶೇಖರ್ ಪತ್ತೆಯಾಗಿಲ್ಲ ಎಂದು ರೇಣುಕಾಚಾರ್ಯ ಹೇಳಿದ್ದಾರೆ.
BIGG NEWS: ಎಎಪಿ ಸಚಿವ ಸತ್ಯೇಂದ್ರ ಜೈನ್ ಗೆ ಲಂಚ ನೀಡಿದ್ದೇನೆ : ಸುಕೇಶ್ ಚಂದ್ರಶೇಖರ್ ಆರೋಪ
ದಾವಣಗೆರೆ ಜಿಲ್ಲೆ ಹೊನ್ನಾಳಿಯಲ್ಲಿರುವ ಮನೆಯಿಂದ ಭಾನುವಾರದಿಂದ ಚಂದ್ರಶೇಖರ್ ನಾಪತ್ತೆಯಾಗಿದ್ದು, ಎರಡು ದಿನಗಳಿಂದ ಎಲ್ಲಾಕಡೆ ಹುಡುಕಿದರೂ ಚಂದ್ರಶೇಖರ್ ಸುಳಿವು ಸಿಗಲಿಲ್ಲ, ಇದರಿಂದ ಆತಂಕಗೊಂಡ ಕುಟುಂಬಸ್ಥರು ದಾವಣಗೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಬಗ್ಗೆ ದೂರು ದಾಖಲಿಸಿಕೊಂಡಿರುವ ಪೊಲೀಸರು ತೀವ್ರ ಶೋಧ ಕಾರ್ಯ ನಡೆಸಿದ್ದಾರೆ.