ಮಂಗಳೂರು: ಮಕರ ಸಂಕ್ರಾಂತಿಯ ಪ್ರಯುಕ್ತ ದೇವಸ್ಥಾನಕ್ಕೆ ತೆರಳಿ ವಾಪಾಸ್ ಆಗುತ್ತಿದ್ದಂತ ವೇಳೆಯಲ್ಲಿ ಶಾಸಕ ರಾಜೇಶ್ ನಾಯ್ಕ್ ತೆರಳುತ್ತಿದ್ದಂತ ಕಾರಿಗೆ ಮತ್ತೊಂದು ಕಾರು ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಶಾಸಕ ರಾಜೇಶ್ ನಾಯ್ಕ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ತೆಂಕ ಎಡಪದವುನಲ್ಲಿ ಶಾಸಕ ರಾಜೇಶ್ ನಾಯಕ್ ಕಾರಿಗೆ ಸ್ವಿಫ್ಟ್ ಕಾರೊಂದು ಡಿಕ್ಕಿಯಾಗಿದೆ. ಹೀಗೆ ಉಂಟಾದಂತ ಡಿಕ್ಕಿಯಲ್ಲಿ ಶಾಸಕ ರಾಜೇಶ್ ನಾಯಕ್ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರೋದಾಗಿ ತಿಳಿದು ಬಂದಿದೆ.
ಸಂಕ್ರಾಂತಿಯ ಅಂಗವಾಗಿ ಎಡಪದವುನಲ್ಲಿದ್ದಂತ ಗೋಪಾಲಕೃಷ್ಣ ದೇವಸ್ಥಾನಕ್ಕೆ ತೆರಳಿ, ಪೂಜೆ ಸಲ್ಲಿಸಿ ಮೂಡಬಿದ್ರಿಗೆ ಹಿಂದಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅಪಘಾತದ ಬಳಿಕ ಸ್ವಿಫ್ಟ್ ಕಾರು ಚಾಲಕ ಅಲ್ಲಿಂದ ಪರಾರಿಯಾಗಿದ್ದಾನೆ. ಆನಂತ್ರ ಆತನನ್ನು ಗುರುಪುರದಲ್ಲಿ ಹಿಡಿದು ಪೊಲೀಸರಿಗೆ ಸ್ಥಳೀಯರು ಒಪ್ಪಿಸಿದ್ದಾರೆ.
ಇದೀಗ ಸ್ವಿಫ್ಟ್ ಕಾರು ಚಾಲಕನನ್ನು ವಶಕ್ಕೆ ಪಡೆದಿರುವಂತ ಬಜ್ಪೆ ಠಾಣೆಯ ಪೊಲೀಸರು ಆತನನ್ನು ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ಕಾರು ಅಪಘಾತದಲ್ಲಿ ಗಾಯಗೊಂಡಿದ್ದಂತ ಶಾಸಕ ರಾಜೇಶ್ ನಾಯಕ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ, ಮನೆಗೆ ವಾಪಾಸ್ ಆಗಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಪ್ರಾಣಾಪಾಯದಿಂದ ಪಾರಾಗಿರೋದಾಗಿ ತಿಳಿದು ಬಂದಿದೆ.
ಅಫ್ಘಾನಿಸ್ತಾನದ ವಿರುದ್ಧದ 2ನೇ ಟಿ20 ಪಂದ್ಯಕ್ಕೆ ಭಾರತ ತಂಡ ಪ್ರಕಟ: ‘ವಿರಾಟ್ ಕೊಹ್ಲಿ’ ಕಂ ಬ್ಯಾಕ್
BREAKING: ಮಣಿಪುರದಲ್ಲಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ‘ಭಾರತ್ ಜೋಡೋ ನ್ಯಾಯ ಯಾತ್ರೆ’ಗೆ ಅದ್ಧೂರಿ ಚಾಲನೆ