ಬೆಂಗಳೂರು : ರಾಜ್ಯದಲ್ಲಿ ಪರಿಶಿಷ್ಟ ಜಾತಿ (Schedule Caste) ಮತ್ತು ಪರಿಶಿಷ್ಟ ಪಂಗಡಗಳ (Schedule Tribes) ಮೀಸಲಾತಿ (Reservation) ಹೆಚ್ಚಳಕ್ಕೆ ವಿಶೇಷ ಸಂಪುಟದಲ್ಲಿ ಒಪ್ಪಿಗೆ ಸೂಚಿಸಿದೆ. ಅಧಿವೇಶನದಲ್ಲಿ ಮಸೂದೆ ಮಂಡನೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ನೇತೃತ್ವದ ಸಂಪುಟ (ಶನಿವಾರ) ನಿನ್ನೆ ಅನುಮೋದನೆ ನೀಡಿದೆ.
ಈ ವಿಚಾರಕ್ಕೆ ಸಂತಸ ವ್ಯಕ್ತಪಡಿಸಿದ ಸುರಪುರ ಶಾಸಕ ರಾಜುಗೌಡ ಪ್ರತಿಕ್ರಿಯೆ ನೀಡಿದ್ದು, ‘ಯಾವತ್ತೂ ನಿಮ್ಮ ಗುಲಾಮರಾಗಿ ಇರ್ತೀವಿ’ ಎಂದು ಹೇಳಿದ್ದಾರೆ.
ವಾಲ್ಮೀಕಿ ಜಯಂತಿ ದಿನಾಚರಣೆ ಅಂಗವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು, ಈ ವೇಳೆ ಮಾತನಾಡಿದ ಶಾಸಕರು ‘ ಸಿಎಂ ಬೊಮ್ಮಾಯಿ ಅವರು ಜೇನುಗೂಡಿಗೆ ಕೈ ಹಾಕಿ ಕಚ್ಚಿಸಿಕೊಂಡು ನಮಗೆ ಜೇನು ತಿನ್ನಿಸುವ ಕೆಲಸ ಮಾಡಿದ್ದಾರೆ. ಈ ಜೀವ ಇರುವವರೆಗೆ ನಿಮಗೆ ಗುಲಾಮರಾಗಿ ಇರ್ತಿವಿ ಎಂದು ಹೇಳಿದರು.
ಜೀವನದಲ್ಲಿ ಮರೆಯಲಾದ ದಿನ ಇದು, ಇಂತಹ ಕೆಲಸ ಆಗಬೇಕು ಅಂದರೆ ಎರಡು ಗುಂಡಿಗೆ ಇರಬೇಕು. ಆ ಗುಂಡಿಗೆ ನಮ್ಮ ಬಸಪ್ಪಣ್ಣನಿಗೆ ಇದೆ. ಅವರು ನಿಜವಾದ ಗಂಡುಗಲಿ ಎಂದು ಸಿಎಂ ಬೊಮ್ಮಾಯಿ ಅವರನ್ನು ಹೊಗಳಿದ್ದಾರೆ.
ನಿನ್ನೆ ಮೀಸಲಾತಿ ಹೆಚ್ಚಳಕ್ಕೆ ನಿರ್ಧರಿಸಿದ ಸರ್ಕಾರದ ನಿರ್ಧಾರವನ್ನು ವಾಲ್ಮೀಕಿ ಪೀಠದ ಪ್ರಸನ್ನಾನಂದ ಸ್ವಾಮೀಜಿ ಸ್ವಾಗತಿಸಿದ್ದಾರೆ. ಬಸವರಾಜ ಬೊಮ್ಮಾಯಿ ಭೇಟಿಯಾಗಿ ಧನ್ಯವಾದ ಸಲ್ಲಿಸಿದ್ದಾರೆ. ಹಲವು ದಿನಗಳಿಂದ ಸರ್ಕಾರಕ್ಕೆ ಭೇಟಿ ಇಡಲಾಗಿತ್ತು. ಇದೀಗ ರಾಜ್ಯದಲ್ಲೆಡೆ ಸಂಭ್ರಮಾಚರಣೆ ನಡೆಸಲಾಗುತ್ತಿದೆ.
ತುಳಿತಕ್ಕೊಳಗಾದವರಿಗೆ ಸಮಾನ ಅವಕಾಶ ಹಾಗೂ ಸ್ವಾಭಿಮಾನದ ಬದುಕು ಕಲ್ಪಿಸಲು ಸರ್ಕಾರ ಬದ್ಧ- CM ಬೊಮ್ಮಾಯಿ
ಪ್ರವಾಸಿಗರಿಗೆ ಗುಡ್ ನ್ಯೂಸ್ : ಕೊಡಚಾದ್ರಿ ಬೆಟ್ಟಕ್ಕೆ ರೋಪ್ ವೇ ; ಟೆಂಡರ್ ಕರೆಯಲು ಕೇಂದ್ರ ಸರ್ಕಾರ ನಿರ್ಧಾರ