BREAKING: ಬೆಂಗಳೂರಲ್ಲಿ ಇಡಿ ಅಧಿಕಾರಿಗಳಿಂದ ಶಾಸಕ ಸತೀಶ್ ಸೈಲ್ ಅರೆಸ್ಟ್ | MLA Satish Sail

ಬೆಂಗಳೂರು: ಇಡಿ ಅಧಿಕಾರಿಗಳು ಶಾಸಕ ಸತೀಶ್ ಸೈಲ್ ಅವರನ್ನು ಅಕ್ರಮ ಆಸ್ತಿ ಪತ್ರೆ ಪ್ರಕರಣದಲ್ಲಿ ಬಂಧಿಸಿದ್ದಾರೆ. ಇಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಂತ ಕಾರವಾರ ಶಾಸಕ ಸತೀಶ್ ಸೈಲ್ ಅವರನ್ನು ಬಂಧಿಸಲಾಗಿದೆ. ಆಗಸ್ಟ್.13, 14ರಂದು ಇಡಿ ಅಧಿಕಾರಿಗಳಿಂದ ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ನಿವಾಸದ ಮೇಲೆ ದಾಳಿ ನಡೆಸಿದ್ದರು. ಈ ದಾಳಿಯ ವೇಳೆಯಲ್ಲಿ ಅಕ್ರಮ ಆಸ್ತಿ ಪಾಸ್ತಿ ಪತ್ತೆಯಾಗಿತ್ತು. ಈ ಹಿನ್ನಲೆಯಲ್ಲಿ ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಈ ವೇಳೆಯಲ್ಲಿ ಅವರನ್ನು ಬಂಧಿಸಲಾಗಿದೆ.