ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದ ಬಳಕೆ ಮಾಡಿದ ಸಂಬಂಧ ಎಫ್ಐಆರ್ ದಾಖಲಿಸಿದ ನಂತ್ರ ಬಂಧನಕ್ಕೆ ಒಳಗಾಗಿದ್ದಾರೆ. ಜಾಮೀನಿಗಾಗಿ ಸಲ್ಲಿಸಿರುವಂತ ಅರ್ಚಿಯ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ವಿಚಾರಣೆ ಆರಂಭಿಸಲಾಗಿದೆ.
ಬೆಳಗಾವಿಯ ಜೆಎಂಎಫ್ ಸಿ ನ್ಯಾಯಾಲಯವು ಪರಿಷತ್ ಸದಸ್ಯ ಸಿ.ಟಿ ರವಿ ಅವರು ತಮ್ಮ ಬಂಧನದ ನಂತ್ರ ಜಾಮೀನಿಗಾಗಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಿ, ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿತ್ತು. ಹೀಗಾಗಿ ಸಿ.ಟಿ ರವಿ ಅವರನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಬೆಂಗಳೂರಿಗೆ ರಸ್ತೆ ಮಾರ್ಗದ ಮೂಲಕ ಕಾರಿನಲ್ಲಿ ಕರೆತರಲಾಗುತ್ತಿದೆ.
ಈ ಬೆನ್ನಲ್ಲೇ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಸೆಷನ್ಸ್ ಕೋರ್ಟ್ ನಲ್ಲಿ ಸಿ.ಟಿ ರವಿ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ಆರಂಭಿಸಲಾಗಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪರವಾಗಿ ಹಿರಿಯ ವಕೀಲ ಶ್ಯಾಮ್ ಸುಂದರ್ ವಾದ ಮಂಡಿಸಿದ್ರೇ, ಸಿ.ಟಿ ರವಿ ಪರವಾಗಿ ಅಶೋಕ್ ಹಾರನಹಳ್ಳಿ ಪ್ರತಿವಾದ ಮಂಡಿಸುತ್ತಿದ್ದಾರೆ.
ಬೆಂಗಳೂರು ಜನತೆ ಗಮನಕ್ಕೆ: ಡಿ.22ರಂದು ಬೆಳಿಗ್ಗೆ 10ರಿಂದ ಈ ಪ್ರದೇಶದಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
GOOD NEWS: ಬೆಂಗಳೂರಲ್ಲಿ ಮುಂದಿನ ತಿಂಗಳು USA ಕಾನ್ಸುಲೇಟ್ ಕಚೇರಿ ಕಾರ್ಯಾರಂಭ