ಬೆಂಗಳೂರು: ವಿಧಾನ ಪರಿಷತ್ ಸದಸ್ಯ ರವಿ ಕುಮಾರ್ ಅವರ ಬೇಜವಾಬ್ದಾರಿಯುತ ಹೇಳಿಕೆಯನ್ನು ಕೆ ಎಎಸ್ ಅಧಿಕಾರಿಗಳ ಸಂಘವು ತೀವ್ರವಾಗಿ ಖಂಡಿಸಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವಂತ ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘವು, ಕಲಬುರಗಿಯ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಅಧಿಕಾರಿ ವಿರುದ್ಧ ಸಾರ್ವಜನಿಕ ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ರವಿ ಕುಮಾರ್ ಅವರು ಮಾಡಿದ ಸ್ವೀಕಾರಾರ್ಹವಲ್ಲದ ಹೇಳಿಕೆಗಳನ್ನು ಅಧಿಕಾರಿಗಳ ಸಂಘವು ತೀವ್ರವಾಗಿ ಖಂಡಿಸುತ್ತದೆ ಎಂದಿದೆ.
ಬಿ. ಫೌಜಿಯಾ ತರನ್ನುಮ್, ಐಎಎಸ್ ಅವರು ಸಾರ್ವಜನಿಕ ಸೇವೆಯಲ್ಲಿ ಸಮರ್ಪಣೆ ಹೊಂದಿರುವ ನಿಷ್ಟಾವಂತ, ಅಧಿಕಾರಿಯ ವಿರುದ್ಧ ಶ್ರೀ ರವಿಕುಮಾರ್ ರವರು ಮಾಡಿದ ಹೇಳಿಕೆಗಳು ಆಧಾರರಹಿತ, ನ್ಯಾಯಸಮ್ಮತವಲ್ಲದ, ಪಚೋದನಕಾರಿ ಮತ್ತು ಸುಳ್ಳು ಹೇಳಿಕೆಗಳು ಅಧಿಕಾರಿಗಳಿಗೆ ತೀವ್ರ ಮಾನಸಿಕ ಆಘಾತವನ್ನುಂಟುಮಾಡುತ್ತವೆ. ಕರ್ತವ್ಯ ನಿರ್ವಹಣೆಯಲ್ಲಿ ತೊಂದರೆಯುಂಟು ಮಾಡುತ್ತದೆ ಎಂದಿದೆ.
ರವಿ ಕುಮಾರ್ ಅವರ ಬೇಜವಾಬ್ದಾರಿ ಮತ್ತು ಸ್ವೀಕಾರಾರ್ಹವಲ್ಲದ ಹೇಳಿಕೆಗಳಿಗೆ ಬೇಷರತ್ ಕ್ಷಮೆಯಾಚಿಸಬೇಕೆಂದು ಸಂಘವು ಒತ್ತಾಯಿಸುತ್ತದೆ. ಹಾಗೂ ಮುಂದಿನ ದಿನಗಳಲ್ಲಿ ಇಂತಹ ಕ್ಷುಲ್ಲಕ ಹೇಳೀಕಗಳನ್ನು ಯಾರು ನೀಡಬಾರದು ಮತ್ತು ಸಾರ್ವಜನಿಕ ಸೇವೆಯಲ್ಲಿರುವ ಅಧಿಕಾರಿಗಳ ಘನತೆ ಗೌರವಕ್ಕೆ ಯಾವುದೇ ದಕ್ಕೆಯುಂಟು ಮಾಡಬಾರದು ಎಂದು ಕೆ.ಎ.ಎಸ್. ಅಧಿಕಾರಿಗಳ ಸಂಘವು ಆಗ್ರಹಿಸುತ್ತದೆ. ಈ ನಿಟ್ಟಿನಲ್ಲಿ ಸರ್ಕಾರವು ಸಾರ್ವಜನಿಕ ಸೇವೆಯಲ್ಲಿರುವ ಅಧಿಕಾರಿಗಳಿಗೆ ಸಂಪೂರ್ಣ ರಕ್ಷಣೆಯನ್ನು ನೀಡಬೇಕೆಂದು ಸಂಘವು ಕೋರಿದೆ.