ಬೆಂಗಳೂರು: ಚಾರಣ ತಾಣಗಳಲ್ಲಿ ನಕಲಿ ಟಿಕೆಟ್ ಬಳಸಿ ಚಾರಣಕ್ಕೆ ತೆರಳುತ್ತಿರುವ ಬಗ್ಗೆ ಆರೋಪಗಳು ಕೇಳಿಬಂದಿದ್ದು, ಇದಕ್ಕಾಗಿ ಚಾರಣ ತಾಣಗಳಲ್ಲಿ ಸಂಚಾರ ದಳಗಳನ್ನು ಆರಂಭಿಸಲು ಕ್ರಮವಹಿಸಲಾಗಿದೆ ಎಂದು ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರು ತಿಳಿಸಿದ್ದಾರೆ.
ಚಾರಣ ತಾಣಗಳಲ್ಲಿ ನಕಲಿ ಟಿಕೆಟ್ ಬಳಸಿ ಚಾರಣಕ್ಕೆ ತೆರಳುತ್ತಿರುವ ಬಗ್ಗೆ ಆರೋಪಗಳು ಕೇಳಿಬಂದಿದ್ದು, ಇದಕ್ಕಾಗಿ ಚಾರಣ ತಾಣಗಳಲ್ಲಿ ಸಂಚಾರ ದಳಗಳನ್ನು ಆರಂಭಿಸಲು ಕ್ರಮವಹಿಸಲಾಗಿದೆ ಎಂದು ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರು ತಿಳಿಸಿದ್ದಾರೆ.#trekking #ticket @CMofKarnataka @siddaramaiah @DKShivakumar @eshwar_khandre pic.twitter.com/0igDT4vWNC
— DIPR Karnataka (@KarnatakaVarthe) October 21, 2024
ಬೆಂಗಳೂರು ನಗರ ವ್ಯಾಪಕವಾಗಿ ಬೆಳೆದಿದೆ ಮತ್ತು ಬೆಳೆಯುತ್ತಿದೆ. ಆದರೆ ಕಬ್ಬನ್ ಪಾರ್ಕ್, ಲಾಲ್ ಬಾಗ್ ನಂತಹ ಮತ್ತೊಂದು ಬೃಹತ್ ಉದ್ಯಾನ ಬೆಂಗಳೂರಿನಲ್ಲಿ ನಿರ್ಮಾಣವೇ ಆಗಲಿಲ್ಲ. ಹೀಗಾಗಿ ಉದ್ಯಾನ ನಗರಿ ಬೆಂಗಳೂರಿನ ಖ್ಯಾತಿಯನ್ನು ಉಳಿಸಲು ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದರು.
ಯಲಹಂಕ ಸುತ್ತಮುತ್ತ ನೂರಾರು ವಸತಿ ಬಡಾವಣೆಗಳಿದ್ದು, ಬಿಡಿಎ ಸಹ 25 ಸಾವಿರ ನಿವೇಶನಗಳ ಡಾ.ಶಿವರಾಮಕಾರಂತ ಬಡಾವಣೆ ಅಭಿವೃದ್ಧಿ ಪಡಿಸುತ್ತಿದೆ. ಜೊತೆಗೆ ಇಲ್ಲಿ 5-6 ಸಾವಿರ ಮನೆಗಳು ಈಗಾಗಲೇ ಇವೆ. ಭವಿಷ್ಯದಲ್ಲಿ 2 ಲಕ್ಷ ಜನರು ವಾಸಿಸುವ ಈ ಪ್ರದೇಶದಲ್ಲಿ ಇಂದಿರಾಗಾಂಧೀ ಜೈವಿಕ ಉದ್ಯಾನ, ಗಿಡಮೂಲಿಕೆಗಳ ದಿವ್ಯೌಷಧ ವನ, ವೃಕ್ಷೋಧ್ಯಾನ ಮತ್ತು ಕಿರು ಮೃಗಾಲಯ ಸ್ಥಾಪಿಸುವುದರಿಂದ ಜನಾಕರ್ಷಣೆಯ ಕೇಂದ್ರವೂ ಆಗುತ್ತದೆ ಜೊತೆಗೆ ಬೆಂಗಳೂರಿನ ಈ ಭಾಗದ ಜನರಿಗೆ ಅತ್ಯುತ್ತಮ ಶ್ವಾಸತಾಣ (ಲಂಗ್ಸ್ ಸ್ಪೇಸ್) ಲಭಿಸಿದಂತಾಗುತ್ತದೆ ಎಂದು ಈಶ್ವರ ಖಂಡ್ರೆ ವಿವರಿಸಿದರು.
ನವೆಂಬರ್ ಅಂತ್ಯಕ್ಕೆ ಶಂಕುಸ್ಥಾಪನೆ:
ಅರಣ್ಯ ಇಲಾಖೆಯಿಂದ ನೆಡುತೋಪಿಗಾಗಿ ಕರ್ನಾಟಕ ಅರಣ್ಯ ನಿಗಮ ನಿಯಮಿತಕ್ಕೆ ನೀಡಲಾಗಿರುವ ಈ 153 ಎಕರೆ ಪ್ರದೇಶವನ್ನು ಇಲಾಖೆಗೆ ಮರಳಿ ಪಡೆಯುವ ಪ್ರಕ್ರಿಯೆಯನ್ನೂ ಈಗಾಗಲೇ ಆರಂಭಿಸಲಾಗಿದ್ದು, ನವೆಂಬರ್ ಕೊನೆಯ ವಾರದಲ್ಲಿ ಈ ಬೃಹತ್ ಉದ್ಯಾನದ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದೂ ಈಶ್ವರ ಖಂಡ್ರೆ ತಿಳಿಸಿದರು.
BIG NEWS: ‘ಕನ್ನಡ ನಾಡಿಗೆ’ ಕೇಂದ್ರದ ಗೌರವ: ಅ.23ರಂದು ‘ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಅಂಚೆ ಚೀಟಿ’ ಬಿಡುಗಡೆ
ಈ ಪ್ರಸಿದ್ಧ ‘ಡೊಳ್ಳು ಕಲಾವಿದ’ನಿಗೆ ಸಿಗುವುದೇ ‘ 2024ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ’.!?