ಬೆಂಗಳೂರು: ಕೇಂದ್ರ ಸರ್ಕಾರದ ಸೂಚನೆಯ ಮೇಲೆಗೆ ದೇಶಾದ್ಯಂತ ಮಾಕ್ ಡ್ರಿಲ್ ನಡೆದಿದೆ. ಇತ್ತ ಕರ್ನಾಟಕದ ಮೂರು ಸ್ಥಳಗಳಲ್ಲಿ ಬೆಂಗಳೂರಲ್ಲೂ ಯುದ್ಧದ ಸೈರನ್ ಮೊಳಗಿದೆ. ಆಪರೇಷನ್ ಸಿಂಧೂರ್ ಬೆನ್ನಲ್ಲೇ ಬೆಂಗಳೂರಲ್ಲಿ ಯುದ್ಧದ ಸೈರನ್ ಮೊಳಗಿದೆ.
ಬೆಂಗಳೂರಿನ ಚಾಮರಾಜಪೇಟೆ, ವೈಯಾಲಿಕಾವಲ್ ಸೇರಿದಂತೆ ಬೆಂಗಳೂರಿನ 35 ಸ್ಥಳಗಳಲ್ಲಿ 2 ನಿಮಿಷ ಸೈರನ್ ಮೊಳಗಿತು. ವೈಯಾಲಿಕಾವಲ್, ಉಪ್ಪಾರಪೇಟೆ ಪೊಲೀಸ್ ಠಾಣೆ, ಕಮರ್ಷಿಯಲ್ ಸ್ಟ್ರೀಟ್, ರಾಜಾಜಿನಗರ ಅಗ್ನಿಶಾಮಕ ಠಾಣೆ, ಹಲಸೂರು ಗೇಟ್ ಕೆರೆಯಲ್ಲಿ ಮಾಕ್ ಡ್ರಿಲ್ ನಡೆಯಿತು.
ಮಧ್ಯಾಹ್ನ 3.58ರಿಂದ ಸಂಜೆ 4ರವರೆಗೆ 2 ನಿಮಿಷ ಸೈರನ್ ಮೊಳಗಲಿದೆ. ಈ ಮೂಲಕ ಕರ್ನಾಟಕದ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಾಕ್ ಡ್ರಿಲ್ ನಡೆಸಲಾಗುತ್ತದೆ.