ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಕಡೆ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆ. ಆದರೂ ಇನ್ನೆರಡು ದಿನ ಕರ್ನಾಟಕದ ಬೆಂಗಳೂರು, ಮಲೆನಾಡು, ಕರಾವಳಿ, ಉತ್ತರ ಕರ್ನಾಟಕದ ಕೆಲವೆಡೆ ಸಾಧಾರಣ ಮಳೆಯಾಗಲಿದೆ.
BIGG NEWS: ಖಗ್ರಾಸ ಚಂದ್ರಗ್ರಹಣ ಹಿನ್ನೆಲೆ: ರಾಜ್ಯದ ಬಹುತೇಕ ದೇವಾಲಯಗಳು ಬಂದ್
ಇಂದಿನಿಂದ ನವೆಂಬರ್ 9ರವರೆಗೆ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಚಳಿ ಹೆಚ್ಚಾಗಿದ್ದು, ಉತ್ತರ ಕರ್ನಾಟಕದ ಹಲವೆಡೆ ಶುಷ್ಕ ವಾತಾವರಣ ಉಂಟಾಗಿದೆ. ಇದರ ನಡುವೆ ತುಂತುರು ಮಳೆಯೂ ಸುರಿಯುತ್ತಿದೆ.ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಇಂದಿನಿಂದ 2 ದಿನ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
BIGG NEWS: ಖಗ್ರಾಸ ಚಂದ್ರಗ್ರಹಣ ಹಿನ್ನೆಲೆ: ರಾಜ್ಯದ ಬಹುತೇಕ ದೇವಾಲಯಗಳು ಬಂದ್
ಮಲೆನಾಡು, ಉತ್ತರ ಒಳನಾಡು, ಕರಾವಳಿ, ಬೆಂಗಳೂರು ಭಾಗದಲ್ಲಿ ಇಂದು ಹಗುರ ಮಳೆಯಾಗುವ ಸಾಧ್ಯತೆಯಿದೆ. ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸೂಚನೆ ನೀಡಲಾಗಿದೆ. ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲೂ ಮಳೆ ಮುಂದುವರೆಯಲಿದೆ.