ನವದೆಹಲಿ : ಈ ಬಾರಿ ಚಿಕ್ಕಮಂಗಳೂರು ಉಡುಪಿ ಕ್ಷೇತ್ರದಲ್ಲಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ ಬಿಜೆಪಿಯ ಶೋಭಾ ಕರಂದ್ಲಾಜೆ ಅವರು ಇಂದು ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು.
ಶೋಭಾ ಕರಂದ್ಲಾಜೆ ಅವರು 2004ರಲ್ಲಿ ಬಿಜೆಪಿ ಎಂಎಲ್ಸಿಯಾಗಿ ಆಯ್ಕೆಯಾಗಿದ್ದಾರೆ. 2014ರಲ್ಲಿ ಉಡುಪಿ ಚಿಕ್ಕಮಂಗಳೂರು ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. 2019 ರಲ್ಲಿ ಲೋಕಸಭಾ ಕ್ಷೇತ್ರದಿಂದ ಎರಡನೇ ಬಾರಿಗೆ ಆಯ್ಕೆಯಾಗಿದ್ದು, ಶಾಸಕಿ,ಎಂಎಲ್ಸಿ ಹಾಗೂ ಸಂಸದರಾಗಿ ಆಯ್ಕೆಯಾಗಿದ್ದಾರೆ. 2018 ರಲ್ಲಿ ಬೆಂಗಳೂರಿನ ಯಶವಂತಪುರದ ಶಾಸಕಿಯಾಗಿದ್ದಾರೆ.
ಇದಕ್ಕೂ ಮೊದಲು ಇಂದು ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ( PM Modi Oath Ceremony ) ಸ್ವೀಕರಿಸಿದರು. ಸತತ ಮೂರನೇ ಬಾರಿಗೆ ಪ್ರಧಾನಿಯಾದ ಹೆಗ್ಗಳಿಕೆಗೆ ನೆಹರು ನಂತ್ರ, ನರೇಂದ್ರ ಮೋದಿ ( Narendra Modi ) ಗಳಿದ್ದಾರೆ. ಇದು 1962 ರಲ್ಲಿ ಜವಾಹರಲಾಲ್ ನೆಹರು ಮಾತ್ರ ಸಾಧಿಸಿದ ಸಾಧನೆಯಾಗಿದೆ.
ಇದಕ್ಕೂ ಮೊದಲು ಕೇಂದ್ರ ಸಚಿವರಾಗಿ ಜೆಪಿ ನಡ್ದ, ನಿತಿನ್ ದಡ್ಕರಿ ಅಂಬ್ಚ್ ಷಾ ರಾಜನಾಥ್ ಸಿಂಗ್, ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು.