ನವದೆಹಲಿ : ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು, ದೇಶದ ಜನರಲ್ಲಿ ಸಂಭ್ರಮ ಮನೆ ಮಾಡಿದೆ. . ಪ್ರಧಾನಿ ನರೇಂದ್ರ ಮೋದಿ ಕೂಡ ದೀಪಾವಳಿ ಹಬ್ಬ ಆಚರಿಸಲು ಸಜ್ಜಾಗಿದ್ದಾರೆ.
ಹೌದು, ಈ ಬಾರಿಯೂ ಭಾರತ ದೇಶದ ಯೋಧರ ಜೊತೆ ಪ್ರಧಾನಿ ಮೋದಿ ದೀಪಾವಳಿ ಆಚರಿಸಲಿದ್ದಾರೆ. ಕಳೆದ 8 ವರ್ಷದಿಂದ ಪ್ರಧಾನಿ ಮೋದಿ ದೀಪಾವಳಿ ಹಬ್ಬವನ್ನು ದೇಶದ ಗಡಿಯಲ್ಲಿರುವ ಯೋಧರ ಜೊತೆ ಆಚರಸಿದ್ದಾರೆ. ದೀಪಾವಳಿ ಹಬ್ಬಕ್ಕೆ ದೇಶದ ಗಡಿಗೆ ತೆರಳಿ ಸಿಹಿ ಹಂಚಿ, ದೀಪಾವಳಿ ಶುಭಾಶಯ ವಿನಿಮಯ ಮಾಡಿಕೊಳ್ಳಲಿದ್ದಾರೆ.
ಆದರೆ ಪ್ರಧಾನಿ ಮೋದಿಯವರು ಯಾವ ಗಡಿ ಪ್ರದೇಶಕ್ಕೆ ತೆರಳಲಿದ್ದಾರೆ ಅನ್ನೋದು ಮಾತ್ರ ಬಹಿರಂಗವಾಗಿಲ್ಲ. ಈ ಬಾರಿ ಮೋದಿ ದೀಪಾವಳಿ ಹಬ್ಬ ಆಚರಣೆಗೂ ಮುನ್ನ ಪವಿತ್ರ ಕೇದಾರನಾಥ ಹಾಗೂ ಬದ್ರಿನಾಥಕ್ಕೆ ತೆರಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ,
ಅಕ್ಟೋಬರ್ 21 ರಂದು ಪ್ರಧಾನಿ ನರೇಂದ್ರ ಮೋದಿ ಕೇದಾರನಾಥಕ್ಕೆ ತೆರಳಲಿದ್ದಾರೆ. ಕೇದಾರನಾಥ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಿರುವ ಮೋದಿ ಬಳಿಕ ಇಲ್ಲಿನ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲಿಸಲಿದ್ದಾರೆ. ಅಕ್ಟೋಬರ್ 24ರ ದೀಪಾವಳಿ ಹಬ್ಬದ ದಿನ ಗಡಿ ಪ್ರದೇಶಕ್ಕೆ ತೆರಳಿ ಭಾರತೀಯ ಯೋಧರ ಜೊತೆ ದೀಪಾವಳಿ ಹಬ್ಬ ಆಚರಿಸಲಿದ್ದಾರೆ.
BREAKING NEWS : ನ.1 ರಂದು ಪ್ರತಿ ಮನೆ ಮೇಲೂ ‘ಕನ್ನಡ ಧ್ವಜ’ ಹಾರಿಸುವಂತೆ ಡಾ.ಮಹೇಶ್ ಜೋಶಿ ಕರೆ