Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಏ. 23, 24 ರಂದು ‘CET’ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ

19/04/2026 7:23 AM

ರಾಜ್ಯದಲ್ಲಿ ಚಾರಣಕ್ಕೆ ತೆರಳುವ ಅಪ್ರಾಪ್ತ ವಯಸ್ಕರಿಗೆ `ಪೋಷಕರ ಅನುಮತಿ ಪತ್ರ’ ಕಡ್ಡಾಯ.!

19/04/2026 7:17 AM

ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ, ಬಸ್ ನಿಲ್ಲಿಸುವಂತಿಲ್ಲ: ಅಪಘಾತ ತಡೆಗೆ ಸುಪ್ರೀಂ ಕೋರ್ಟ್‌ನಿಂದ ಕಟ್ಟುನಿಟ್ಟಿನ ಆದೇಶ!

19/04/2026 7:16 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ, ದೇಶದಲ್ಲಿ ಕೃಷಿ ಉತ್ಪಾದನೆ ಕುಸಿತಕ್ಕೆ ಮೋದಿ ಸರ್ಕಾರದ ಮುನ್ನುಡಿ: ಸಿಎಂ ಸಿದ್ಧರಾಮಯ್ಯ
KARNATAKA

ರಾಜ್ಯದಲ್ಲಿ, ದೇಶದಲ್ಲಿ ಕೃಷಿ ಉತ್ಪಾದನೆ ಕುಸಿತಕ್ಕೆ ಮೋದಿ ಸರ್ಕಾರದ ಮುನ್ನುಡಿ: ಸಿಎಂ ಸಿದ್ಧರಾಮಯ್ಯ

By kannadanewsnow0929/11/2024 9:12 PM

ದೆಹಲಿ : ರಾಜ್ಯದ ರೈತರಿಗೆ ನೀಡಬೇಕಾಗಿದ್ದ ನಬಾರ್ಡ್ ಹಣದಲ್ಲಿ ಶೇ58 ರಷ್ಟು ಕೇಂದ್ರ ಸರ್ಕಾರ ಕಡಿತಗೊಳಿಸಿರುವುದರಿಂದ ರೈತರು ಅಧಿಕ ಬಡ್ಡಿಗೆ ಸಾಲಕೊಡುವ ಲೇವಾದೇವಿದಾರರ ಸುಳಿಗೆ ಸಿಲುಕಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದರು.

ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು.

ರೈತರಿಗೆ ನೀಡುತ್ತಿದ್ದ ಸಬ್ಸಡಿ ಸಾಲ ಕಡಿತಗೊಳಿಸಿದ್ದರಿಂದ ರಾಜ್ಯದಲ್ಲಿ ಮತ್ತು ದೇಶದಲ್ಲಿ ಆಹಾರ ಉತ್ಪಾದನೆಯ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಎಂದರು.

ರಾಜ್ಯದ ರೈತರಿಗೆ ಮಾತ್ರ ನಬಾರ್ಡ್ ಸಾಲದ ಪ್ರಮಾಣ ಕಡಿಮೆ ಮಾಡಿಲ್ಲ. ಇಡೀ ದೇಶದಲ್ಲಿ ಕಡಿತಗೊಳಿಸಲಾಗಿದೆ ಎನ್ನುವ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಇದರಿಂದ ಇಡೀ ದೇಶದ ರೈತರನ್ನು ಸಂಕಷ್ಟಕ್ಕೆ ದೂಡಿದಂತಾಗಿದೆ. ಇಡೀ ದೇಶದ ಕೃಷಿ ಉತ್ಪಾದನೆ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಎಂದರು.

ನಬಾರ್ಡ್ 4.5% ಬಡ್ಡಿಗೆ ರೈತರ ಸಾಲದ ಹಣ ನೀಡುತ್ತಿತ್ತು. ನಾವು ರೈತರಿಗೆ ಬಡ್ಡಿ ರಹಿತವಾಗಿ ಸಾಲ ನೀಡಿ ಈ 4.5% ಬಡ್ಡಿಯನ್ನು ಸರ್ಕಾರವೇ ಭರಿಸುತ್ತಿತ್ತು. ಈಗ ರಾಷ್ಟ್ರೀಕೃತ ವಾಣಿಜ್ಯ ಬ್ಯಾಂಕ್ ಗಳಿಂದ ಸಾಲ ಪಡೆಯುವಂತೆ ಕೇಂದ್ರ ಸರ್ಕಾರ ಹೇಳುತ್ತಿದೆ. ಶೇ10 ಬಡ್ಡಿ ದರದಲ್ಲಿ ವಾಣಿಜ್ಯ ಬ್ಯಾಂಕ್ ಗಳು ಸಾಲ ನೀಡುತ್ತವೆ. ಇದರಿಂದ ಬ್ಯಾಂಕ್ ಗಳಿಗೆ ಲಾಭ ಆಗುತ್ತದೆಯೇ ಹೊರತು ರೈತರಿಗೆ ಅನುಕೂಲ ಇಲ್ಲ ಎಂದರು.‌

15 ನೇ ಹಣಕಾಸು ಆಯೋಗದಲ್ಲೂ ರಾಜ್ಯಕ್ಕೆ ಅನ್ಯಾಯ ಆಯಿತು. ಭದ್ರಾ ಮೇಲ್ದಂಡೆ ಯೋಜನೆಗೆ 5000 ಕೋಟಿ ಘೋಷಿಸಿ ಒಂದು ಪೈಸೆಯನ್ನೂ ಕೊಡಲಿಲ್ಲ. ಫೆರಿಫೆರಲ್ ರಿಂಗ್ ರಸ್ತೆಗೂ ಕೊಡಲಿಲ್ಲ. ಇವೆಲ್ಲದರಿಂದ 11000 ಕೋಟಿ ರೂ ರಾಜ್ಯಕ್ಕೆ ನಷ್ಟವಾಗಿದ್ದನ್ನೂ ಪ್ರಧಾನಮಂತ್ರಿಯವರಿಗೆ ನೆನಪಿಸಿದ್ದೇವೆ. ಹೀಗಾಗಿ ಈ ಬಾರಿ ಮತ್ತೆ ನಬಾರ್ಡ್ ಮೂಲಕ ಆಗಿರುವ ಅನ್ಯಾಯವನ್ನು ಸರಿಪಡಿಸಲು ಮನವಿ ಮಾಡಿದ್ದೇವೆ ಎಂದರು.

ರಾಜ್ಯದ ಸಂಸದರು ಬಾಯಿ ಬಿಡಲ್ಲ: ಮಣ್ಣಿನ ಮಗ ಮಂತ್ರಿ ಏನು ಮಾಡುತ್ತಿದ್ದಾರೆ?

ರಾಜ್ಯಕ್ಕೆ ನಿರಂತರ ಅನ್ಯಾಯ ಆಗುತ್ತಿದೆ. ಮಹದಾಯಿ, ಮೇಕೆದಾಟುಗೆ ಅನುಮತಿ ನೀಡುತ್ತಿಲ್ಲ. ಇಷ್ಟಾದರೂ ರಾಜ್ಯದಿಂದ ಆಯ್ಕೆ ಆಗಿರುವ ಬಿಜೆಪಿ ಸಂಸದರು ಬಾಯಿ ಬಿಡುತ್ತಿಲ್ಲ. ಮಣ್ಣಿನ ಮಗ ಅಂದುಕೊಂಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಏನು ಮಾಡುತ್ತಿದ್ದಾರೆ. ರಾಜ್ಯಸಭಾ ಸದಸ್ಯರಾದ ಮಾಜಿ ಪ್ರಧಾನಿ ದೇವೇಗೌಡರೂ ರಾಜ್ಯಕ್ಕೆ ಆಗುತ್ತಲೇ ಇರುವ ಅನ್ಯಾಯಗಳ ವಿರುದ್ಧ ಬಾಯಿ ಬಿಡುತ್ತಿಲ್ಲ ಏಕೆ ಎಂದು ಪ್ರಶ್ನಿಸಿದರು.

ಸಚಿವರಾದ ಕೆ.ಜೆ.ಜಾರ್ಜ್, ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.

ಭತ್ತ ಕಟಾವಿಗೆ ಪ್ರತಿ ಗಂಟೆಗೆ ರೂ.2,300 ಬಾಡಿಗೆ ನಿಗದಿ, ಹೆಚ್ಚಿನ ದರ ಪಡೆದರೆ ಕಠಿಣ ಕ್ರಮ: ಡಿಸಿ ಆದೇಶ

ಬಸವಣ್ಣನನ್ನು ಅವಮಾನಿಸಿದ ಬಸನಗೌಡ ಯತ್ನಾಳ್ ಮಾತುಗಳನ್ನು ಕಟುವಾಗಿ ಖಂಡಿಸಿದ ಸಚಿವ ಪ್ರಿಯಾಂಕ್ ಖರ್ಗೆ

Share. Facebook Twitter LinkedIn WhatsApp Email

Related Posts

BIG NEWS : ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಏ. 23, 24 ರಂದು ‘CET’ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ

19/04/2026 7:23 AM2 Mins Read

ರಾಜ್ಯದಲ್ಲಿ ಚಾರಣಕ್ಕೆ ತೆರಳುವ ಅಪ್ರಾಪ್ತ ವಯಸ್ಕರಿಗೆ `ಪೋಷಕರ ಅನುಮತಿ ಪತ್ರ’ ಕಡ್ಡಾಯ.!

19/04/2026 7:17 AM1 Min Read

ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ಹದಿಹರೆಯದವರ ರಕ್ಷಣೆಗೆ `SOP’ ಕಡ್ಡಾಯ: ಶಿಕ್ಷಣ ಇಲಾಖೆ ಮಹತ್ವದ ಆದೇಶ

19/04/2026 6:58 AM1 Min Read
Recent News

BIG NEWS : ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಏ. 23, 24 ರಂದು ‘CET’ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ

19/04/2026 7:23 AM

ರಾಜ್ಯದಲ್ಲಿ ಚಾರಣಕ್ಕೆ ತೆರಳುವ ಅಪ್ರಾಪ್ತ ವಯಸ್ಕರಿಗೆ `ಪೋಷಕರ ಅನುಮತಿ ಪತ್ರ’ ಕಡ್ಡಾಯ.!

19/04/2026 7:17 AM

ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ, ಬಸ್ ನಿಲ್ಲಿಸುವಂತಿಲ್ಲ: ಅಪಘಾತ ತಡೆಗೆ ಸುಪ್ರೀಂ ಕೋರ್ಟ್‌ನಿಂದ ಕಟ್ಟುನಿಟ್ಟಿನ ಆದೇಶ!

19/04/2026 7:16 AM

BIG NEWS : ವರದಕ್ಷಿಣೆ ನೀಡಿದ್ದಾಗಿ ಒಪ್ಪಿಕೊಂಡರೂ ಪತ್ನಿಯ ಕುಟುಂಬದ ವಿರುದ್ಧ `ಕ್ರಿಮಿನಲ್ ಕೇಸ್’ ದಾಖಲಿಸುವಂತಿಲ್ಲ : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

19/04/2026 7:07 AM
State News
KARNATAKA

BIG NEWS : ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಏ. 23, 24 ರಂದು ‘CET’ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ

By kannadanewsnow5719/04/2026 7:23 AM KARNATAKA 2 Mins Read

ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಏ.23 ಮತ್ತು 24 ರಂದು ಜಿಲ್ಲೆಯಲ್ಲಿ ಸಿಇಟಿ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಶಿಸ್ತುಬದ್ಧವಾಗಿ ಮತ್ತು…

ರಾಜ್ಯದಲ್ಲಿ ಚಾರಣಕ್ಕೆ ತೆರಳುವ ಅಪ್ರಾಪ್ತ ವಯಸ್ಕರಿಗೆ `ಪೋಷಕರ ಅನುಮತಿ ಪತ್ರ’ ಕಡ್ಡಾಯ.!

19/04/2026 7:17 AM

ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ಹದಿಹರೆಯದವರ ರಕ್ಷಣೆಗೆ `SOP’ ಕಡ್ಡಾಯ: ಶಿಕ್ಷಣ ಇಲಾಖೆ ಮಹತ್ವದ ಆದೇಶ

19/04/2026 6:58 AM

ರಾಜ್ಯದ ಸಣ್ಣ ಗುತ್ತಿಗೆದಾರರ ಹೋರಾಟಕ್ಕೆ ಫಲ : ₹300 ಕೋಟಿ ಬಾಕಿ ಬಿಡುಗಡೆ ಮಾಡಿದ ಸರ್ಕಾರ

19/04/2026 6:52 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.