ತಿರುಚಿರಾಪಳ್ಳಿ: ತಮಿಳುನಾಡಿನ ತಿರುಚಿರಾಪಳ್ಳಿ ತಲುಪಿದ ಪ್ರಧಾನಿ ಮೋದಿ ಅವರನ್ನು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮತ್ತು ರಾಜ್ಯಪಾಲ ಆರ್ ಎನ್ ರವಿ ಬರಮಾಡಿಕೊಂಡರು.
ಮೋದಿ ಅವರು ಭಾರತೀದಾಸನ್ ವಿಶ್ವವಿದ್ಯಾಲಯದ 38ನೇ ಘಟಿಕೋತ್ಸವ ಸಮಾರಂಭದಲ್ಲಿ ಅವರು ಭಾಗವಹಿಸಿದ್ದರು. ನಂತರ ತಿರುಚಿರಾಪಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ₹1,100 ಕೋಟಿಗೂ ಹೆಚ್ಚು ವೆಚ್ಚದಲ್ಲಿ ಅಭಿವೃದ್ಧಿ ಪಡಿಸಿರುವ ನೂತನ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಿದರು.
ಇನ್ನೂ, ತಮಿಳುನಾಡಿನಲ್ಲಿ ₹19,850 ಕೋಟಿಗೂ ಅಧಿಕ ಮೊತ್ತದ ಹಲವು ಯೋಜನೆಗಳಿಗೆ ಪ್ರಧಾನಿ ಮೋದಿ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಲಕ್ಷದ್ವೀಪಕ್ಕೆ ಭೇಟಿ ನೀಡಿ ಪ್ರಧಾನಿ ಮೋದಿ ₹ 1,150 ಕೋಟಿಗೂ ಹೆಚ್ಚು ಮೊತ್ತದ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಮೋದಿ ಅವರು ಕೊಚ್ಚಿ-ಲಕ್ಷದ್ವೀಪ ದ್ವೀಪಗಳ ಜಲಾಂತರ್ಗಾಮಿ ಆಪ್ಟಿಕಲ್ ಫೈಬರ್ ಸಂಪರ್ಕ (KLI – SOFC) ಯೋಜನೆ ಮತ್ತು ಕಡಮತ್‌ನಲ್ಲಿ ಕಡಿಮೆ-ತಾಪಮಾನದ ಥರ್ಮಲ್ ಡಿಸಲೈನೇಷನ್ (LTTD) ಸ್ಥಾವರವನ್ನು ಉದ್ಘಾಟಿಸಲಿದ್ದಾರೆ.
ರಾಷ್ಟ್ರಕ್ಕೆ ಸಮರ್ಪಿತವಾಗಿರುವ ಇತರ ಯೋಜನೆಗಳು ಕವರಟ್ಟಿಯಲ್ಲಿ ಸೌರ ವಿದ್ಯುತ್ ಸ್ಥಾವರವನ್ನು ಒಳಗೊಂಡಿವೆ, ಇದು ಲಕ್ಷದ್ವೀಪದ ಮೊದಲ ಬ್ಯಾಟರಿ ಬೆಂಬಲಿತ ಸೌರ ವಿದ್ಯುತ್ ಯೋಜನೆಯಾಗಿದೆ. ಪ್ರಧಾನಿಯವರು ನಾಳೆ ಕೇರಳದಲ್ಲಿ ತಮ್ಮ ಭೇಟಿಯನ್ನು ಮುಕ್ತಾಯಗೊಳಿಸಲಿದ್ದಾರೆ.
BREAKING : ಜಮ್ಮು ಕಾಶ್ಮೀರದಲ್ಲಿ 3.9 ತೀವ್ರತೆಯ ಭೂಕಂಪ | Earthquake in Jammu Kashmir
BREAKING : ಜಮ್ಮು ಕಾಶ್ಮೀರದಲ್ಲಿ 3.9 ತೀವ್ರತೆಯ ಭೂಕಂಪ | Earthquake in Jammu Kashmir