ಬೆಂಗಳೂರು : “ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಂಡರೆ ಭಯ. ಹೀಗಾಗಿ ಅವರ ಕ್ಷೇತ್ರದಿಂದ ಪ್ರಚಾರ ಆರಂಭಿಸಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಮೋದಿ ಅವರು ಕರ್ನಾಟಕದಿಂದ ಚುನಾವಣಾ ಪ್ರಚಾರ ಆರಂಭಿಸಿದ್ದು, ಕಾಂಗ್ರೆಸ್ ಕಲಬುರ್ಗಿಯಲ್ಲಿ ಗೆಲ್ಲುವುದೇ ಎಂದು ಕೇಳಿದಾಗ, “ಕಲಬುರ್ಗಿ ಸೇರಿದಂತೆ ರಾಜ್ಯದ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ” ಎಂದು ತಿಳಿಸಿದರು.
20ರಂದು ಎರಡನೇ ಪಟ್ಟಿ ಅಂತಿಮ ಸಾಧ್ಯತೆ
ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಯಾವಾಗ ಎಂದು ಕೇಳಿದಾಗ, “ಇಂದು ಸಂಜೆ ಮುಂಬೈನಲ್ಲಿ ನಡೆಯಲಿರುವ ಭಾರತ ಜೋಡೋ ನ್ಯಾಯ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ನಾವು ತೆರಳುತ್ತಿದ್ದೇವೆ. 19ರಂದು ಸಿಇಸಿ ಸಭೆ ನಡೆಯಲಿದ್ದು, 20ರಂದು ಪಟ್ಟಿ ಅಂತಿಮವಾಗಬಹುದು” ಎಂದು ತಿಳಿಸಿದರು.
21ರಂದು ಗ್ಯಾರಂಟಿ ಸಮಿತಿ ಸದಸ್ಯರ ಸಭೆ
“ಇನ್ನು ರಾಜ್ಯದಲ್ಲಿ ತಾಲೂಕು, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರುಗಳ ಸಭೆಯನ್ನು 21ರಂದು ನಡೆಸಲಿದ್ದೇವೆ. ಇವರೆಲ್ಲರಿಗೂ ಲೋಕಸಭೆ ಚುನಾವಣೆಯ ಜವಾಬ್ದಾರಿ ನೀಡಲಾಗುವುದು” ಎಂದು ತಿಳಿಸಿದರು.
‘ವೋಟರ್ ಲೀಸ್ಟ್’ನಲ್ಲಿ ನಿಮ್ಮ ಹೆಸರು ತೆಗೆದು ಹಾಕಲಾಗಿದೆಯೇ? ಜಸ್ಟ್ ಹೀಗೆ ಮಾಡಿ, ಮತ್ತೆ ಸೇರಿಸಿ