ಬೆಂಗಳೂರು : ರಾಜ್ಯಕ್ಕೆ ಇಂದು ಪ್ರಧಾನಿ ಮೋದಿ ಆಗಮಿಸಲಿದ್ದು, ಇಂದು ಒಂದೇ ದಿನ ಬೆಳಗಾವಿ, ಶಿರಸಿ, ದಾವಣಗೆರೆ, ಹೊಸಪೇಟೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ನಡೆಸಲಿದ್ದಾರೆ.
ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ ಶಿವಮೊಗ್ಗ, ಮೈಸೂರು, ಬೆಂಗಳೂರು ಹಾಗೂ ಮಂಗಳೂರಿನಲ್ಲಿ ಮೋದಿ ಅವರು ಪ್ರಚಾರ, ರೋಡ್ಶೋ ನಡೆಸಿದ್ದರು, ಇಂದು ಬೆಳಗಾವಿ, ದಾವಣಗೆರೆ, ಉತ್ತರ ಕನ್ನಡ, ವಿಜಯನಗರ ಜಿಲ್ಲೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.
ಪ್ರಧಾನಮಂತ್ರಿಯವರು ಏಪ್ರಿಲ್ 28 ರಂದು ದಾವಣಗೆರೆಗೆ ಆಗಮಿಸಿ ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಿರುವ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಭಾಗವಹಿಸುವುದರಿಂದ ಭದ್ರತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಏಪ್ರಿಲ್ 28 ರ ಬೆಳಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ದಾವಣಗೆರೆ ಹಾಗೂ ಹರಿಹರ ತಾಲ್ಲೂಕಿನಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಮದ್ಯದಂಗಡಿ ಮುಚ್ಚಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ; ವೆಂಕಟೇಶ್ ಎಂ.ವಿ ಆದೇಶಿಸಿದ್ದಾರೆ.