ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಕುಂಭಮೇಳದಲ್ಲಿ ಪವಿತ್ರ ಸ್ನಾನಕ್ಕಾಗಿ ಪ್ರಯಾಗ್ ರಾಜ್ ಗೆ ಆಗಮಿಸಿದ್ದಾರೆ. ದೆಹಲಿಯಿಂದ ಪ್ರಯಾಗ್ ರಾಜ್ ಗೆ ಆಗಮಿಸಿರುವಂತ ಅವರು ಕೆಲವೇ ಕ್ಷಣಗಳಲ್ಲಿ ಪುಣ್ಯಸ್ನಾನ ಮಾಡಲಿದ್ದಾರೆ.
ದೆಹಲಿಯಿಂದ ಪ್ರಯಾಗ್ ರಾಜ್ ಗೆ ವಿಶೇಷ ವಿಮಾನದಲ್ಲಿ ಆಗಮಿಸಿದಂತ ಪ್ರಧಾನಿ ನರೇಂದ್ರ ಮೋದಿಯವರು, ಪ್ರಯಾಗ್ ರಾಜ್ ಸಂಘಮ್ ಘಾಟ್ ಗೆ ತೆರಳುತ್ತಿದ್ದಾರೆ. ಪ್ರಧಾನಿ ಮೋದಿಗೆ ಯುವಿ ಸಿಎಂ ಯೋಗಿ ಆದಿತ್ಯನಾಥ್ ಸಾಥ್ ನೀಡಿದ್ದಾರೆ.
ಪ್ರಯಾಗ್ ರಾಜ್ ನಿಂದ ಸಂಗಮ್ ಘಾಟ್ ಗೆ ತೆರಳುತ್ತಿರುವಂತ ಪ್ರಧಾನಿ ನರೇಂದ್ರ ಮೋದಿಯವರು, ಅಲ್ಲಿ ಕುಂಭಮೇಳದ ಪ್ರಯುಕ್ತ ಪವಿತ್ರ ಸ್ನಾನವನ್ನು ಮಾಡಲಿದ್ದಾರೆ.