ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ನಿವಾಸದ ಮೇಲೆ ದಾಳಿ ನಡೆದಿದೆ ಎಂದು ವರದಿಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಕಳವಳ ವ್ಯಕ್ತಪಡಿಸಿದ್ದು, ರಾಜತಾಂತ್ರಿಕತೆಯು ಶಾಂತಿಗೆ ಏಕೈಕ ವಿಶ್ವಾಸಾರ್ಹ ಮಾರ್ಗವಾಗಿದೆ ಎಂದು ಒತ್ತಿ ಹೇಳಿದ್ದಾರೆ.
ಈ ವರದಿಗಳ ಬಗ್ಗೆ ಪ್ರತಿಕ್ರಿಯಿಸಿದ ಮೋದಿ, ನಡೆಯುತ್ತಿರುವ ಹಗೆತನದ ನಡುವೆ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸುವ ಬೆಳವಣಿಗೆಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ, “ರಷ್ಯಾ ಒಕ್ಕೂಟದ ಅಧ್ಯಕ್ಷರ ನಿವಾಸದ ಮೇಲೆ ದಾಳಿ ನಡೆದಿರುವ ವರದಿಗಳಿಂದ ತೀವ್ರ ಕಳವಳವಾಗಿದೆ. ನಡೆಯುತ್ತಿರುವ ರಾಜತಾಂತ್ರಿಕ ಪ್ರಯತ್ನಗಳು ಯುದ್ಧವನ್ನು ಕೊನೆಗೊಳಿಸಲು ಮತ್ತು ಶಾಂತಿಯನ್ನು ಸಾಧಿಸಲು ಅತ್ಯಂತ ಕಾರ್ಯಸಾಧ್ಯವಾದ ಮಾರ್ಗವನ್ನು ನೀಡುತ್ತವೆ. ಈ ಪ್ರಯತ್ನಗಳ ಬಗ್ಗೆ ಗಮನಹರಿಸಲು ಮತ್ತು ಅವುಗಳನ್ನು ದುರ್ಬಲಗೊಳಿಸುವ ಯಾವುದೇ ಕ್ರಮಗಳನ್ನು ತಪ್ಪಿಸಲು ಸಂಬಂಧಪಟ್ಟ ಎಲ್ಲರಿಗೂ ನಾವು ಮನವಿ ಮಾಡುತ್ತೇವೆ” ಎಂದಿದ್ದಾರೆ.








