ನವದೆಹಲಿ: ದೀಪಾವಳಿ ಹಬ್ಬಕ್ಕೂ ಮುನ್ನ ನಿನ್ನೆ ಪ್ರಧಾನಿ ನರೇಂದ್ರ ಮೋದಿ(Prime Minister Narendra Modi) ಅವರು ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯಡಿ 12ನೇ ಕಂತಿನ ಹಣವನ್ನು ರೈತರಿಗೆ ಬಿಡುಗಡೆ ಮಾಡಿದರು.
ದೆಹಲಿಯಲ್ಲಿ ನಿನ್ನೆ ನಡೆದ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ “ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನ 2022” ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪಿಎಂ ಕಿಸಾನ್ ಯೋಜನೆಯಡಿ 16,000 ಕೋಟಿ ರೂ.ಗಳನ್ನು ಬಿಡುಗಡೆ ಬಿಡುಗಡೆ ಮಾಡಿದರು. ಈ ಹಣ ಸುಮಾರು 10 ಕೋಟಿಗೂ ಹೆಚ್ಚು ರೈತರ ಖಾತೆಗಳಿಗೆ ಜಮೆಯಾಗಿದೆ.
ಈ ಯೋಜನೆಯಡಿಯಲ್ಲಿ ಇದುವರೆಗೆ ವರ್ಗಾಯಿಸಲಾದ ಒಟ್ಟು ಮೊತ್ತವು 2.16 ಟ್ರಿಲಿಯನ್ಗಳನ್ನು ಮೀರುವ ಸಾಧ್ಯತೆಯಿದೆ. ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನೇರವಾಗಿ ವರ್ಗಾಯಿಸಲಾಗುತ್ತದೆ. ಕೇಂದ್ರವು ಈ ಆದಾಯ ಬೆಂಬಲ ಯೋಜನೆಯಡಿ ಮುಖ್ಯವಾಗಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಮೂರು ಸಮಾನ ಕಂತುಗಳಲ್ಲಿ (ಪ್ರತಿ ನಾಲ್ಕು ತಿಂಗಳಿಗೊಮ್ಮೆ ತಲಾ ರೂ 2,000) ವರ್ಷಕ್ಕೆ ರೂ 6,000 ಒದಗಿಸುತ್ತದೆ.
BIGG NEWS : ವಿಕಲಚೇತನ ವಿದ್ಯಾರ್ಥಿಗಳೇ ಗಮನಿಸಿ : ನ್ಯಾಷನಲ್ ಇ-ಸ್ಕಾಲರ್ಶಿಪ್ ಗೆ ಅರ್ಜಿ ಆಹ್ವಾನ
BIG NEWS : ಪ್ರಯಾಣಿಕರೇ ಗಮನಿಸಿ: ಇಂದು ಬೆಳಿಗ್ಗೆ 11 ರಿಂದ ಸಂಜೆ 5 ರವರೆಗೆ ಮುಂಬೈ ವಿಮಾನ ನಿಲ್ದಾಣ ಬಂದ್… ಕಾರಣ?
BIGG NEWS : ಇನ್ಮುಂದೆ ರಸಗೊಬ್ಬರಗಳು ಭಾರತ್ ಬ್ರ್ಯಾಂಡ್ ಗಳಲ್ಲಿ ಲಭ್ಯ : ಕೃಷಿ ಸಚಿವ ಬಿ.ಸಿ ಪಾಟೀಲ್