ಬೆಂಗಳೂರು : ಕರ್ನಾಟಕದ ಸಮಸ್ತ ಜನರಿಗೆ ನನ್ನ ಕೋಟಿಕೋಟಿ ಪ್ರಣಾಮಗಳು ಎಂದು ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿ ಭಾಷಣ ಆರಂಭಿಸಿದರು.
ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿ, ಮೊದಲಿಗೆ ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ ನರೇಂದ್ರ್ ಮೋದಿ ಕರ್ನಾಟಕದ ಸಮಸ್ತ ಜನತೆಗೆ ನನ್ನ ಕೋಟಿ ಕೋಟಿ ನಮಸ್ಕಾರಗಳು ಎಂದಿದ್ದಾರೆ.
ಕರ್ನಾಟಕದಿಂದ ದೇಶಕ್ಕೆ ಹಲವು ಕೊಡುಗೆ ಸಿಕ್ಕಿದೆ. ಕನ್ನಡ ನೆಲದ ಸಾಧಕರನ್ನು ಗೌರವಿಸುವುದು ನಮ್ಮ ಕರ್ತವ್ಯ. ನಾವು ಕರ್ನಾಟಕಕ್ಕೆ ನೀಡಿದ್ದ ಭರವಸೆಗಳನ್ನು ಈಡೇರಿಸುತ್ತಿದ್ದೇವೆ. ಕೆಂಪೇಗೌಡರ ಚಿಂತನೆಗಳು ಭವಿಷ್ಯದ ಕರ್ನಾಟಕ, ಭಾರತ ಹೇಗಿರಬೇಕು ಎಂಬ ಬಗ್ಗೆ ಪ್ರೇರಣೆ ನೀಡುತ್ತದೆ. ಭಾರತದ ಭವಿಷ್ಯಕ್ಕೆ ಸ್ಟಾರ್ಟ್ಅಪ್ ಮುಖ್ಯ. ಅದಕ್ಕೆ ಬೆಂಗಳೂರು ಬಹುದೊಡ್ಡ ಕೊಡುಗೆ ನೀಡುತ್ತದೆ ಎಂದರು. ಭಾರತ ಇನ್ನು ಕುಂಟುವುದಿಲ್ಲ, ಅಭಿವೃದ್ಧಿ ಪಥದಲ್ಲಿ ವೇಗವಾಗಿ ಹೆಜ್ಜೆ ಹಾಕುತ್ತದೆ, ಡಬಲ್ ಇಂಜಿನ್ ಸರ್ಕಾರದ ಅಭಿವೃದ್ದಿ ವೇಗ ಇನ್ನಷ್ಟು ಹೆಚ್ಚಾಗಲಿದೆ ಎಂದರು.
‘ಟಿಪ್ಪು ಜಯಂತಿ’ ಆಚರಣೆ ವೇಳೆ ಖಡ್ಗ ಝಳಪಿಸಿದ ಕಾಂಗ್ರೆಸ್ ಮುಖಂಡರು |Tippu Jayanthi
.