ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಇಂದು ಕೆಲವೇ ಕ್ಷಣಗಳಲ್ಲಿ ಬೆಂಗಳೂರು ಬಂದಿಳಿಯಲಿದ್ದಾರೆ.
ಈ ಹಿನ್ನೆಲೆ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವರು ಹೆಚ್ ಎ ಎಲ್ ಏರ್ಪೋರ್ಟ್ ನಲ್ಲಿ ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾಗಿದ್ದಾರೆ. ವಿಶೇಷ ವಿಮಾನದ ಮೂಲಕ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮೋದಿ ನಂತರ ವಿಧಾನಸೌಧಕ್ಕೆ ತೆರಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.