ಬೆಂಗಳೂರು : ಏಪ್ರಿಲ್ 9ರಂದು ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ದಿನಾಂಕ ಘೋಷಣೆ ಬೆನ್ನಲ್ಲೇ, ಇದೀಗ ಬಾಗಲಕೋಟೆ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ನಾವೇ ಗೆಲ್ಲುತ್ತೇವೆ ಎಂದು ಬೆಂಗಳೂರಿನ ವಿಧಾನಸೌಧದಲ್ಲಿ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ವಿರೋಧಿ ಅಲೆ ಈ ಸಲ ನಮಗೆ ಅನುಕೂಲವಾಗುತ್ತದೆ. ಪ್ರಧಾನಿ ಮೋದಿ ಜನಪ್ರಿಯತೆ ಕಡಿಮೆ ಆಗಿದೆ ಹಾಗಾಗಿ ಈ ಬಾರಿ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗಳಲ್ಲಿ ನಾವೇ ಗೆಲ್ಲುತ್ತೇವೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.








