ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಮಾನಹಾನಿಕರ ವೀಡಿಯೋ ಹರಿಬಿಟ್ಟಿದ್ದ ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧ ಕೋರ್ಟ್ ಆದೇಶ ನೀಡಿದ್ದು, ಸಮೀರ್ ತನ್ನ ಯೂಟ್ಯೂಬ್ ಚಾನೆಲ್ ನಲ್ಲಿ ಹರಿಬಿಟ್ಟಿದ್ದ ವೀಡಿಯೋ ಮಾನ್ಯ ಪ್ರಧಾನ ಸಿಟಿ ಸಿವಿಲ್ ಕೋರ್ಟ್ ಆದೇಶದನ್ವಯ ಡಿಲೀಟ್ ಆಗಿದೆ.
ಈ ಹಿಂದೆ ಕರ್ನಾಟಕ ಹೈಕೋರ್ಟ್ ನ್ಯಾ ಆರ್ ದೇವದಾಸ್ ಅವರಿದ್ದ ಏಕಸದಸ್ಯ ಪೀಠ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಅವರ ಹಿಂಬಾಲಕರು ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿಗಳು, ಕುಟುಂಬ ಸದಸ್ಯರು ಹಾಗೂ ಧರ್ಮಸ್ಥಳಕ್ಕೆ ಸಂಭಂಧಿಸಿದ ಯಾವುದೇ ಸಂಸ್ಥೆಗಳ ಬಗ್ಗೆ ಮಾನಹಾನಿ ಹೇಳಿಕೆಗಳನ್ನ ನೀಡಬಾರದು ಎಂದು ಆದೇಶ ನೀಡಿತ್ತು.
ಯೂಟ್ಯೂಬರ್ ಸಮೀರ್ ವಿರುದ್ಧ ಪ್ರಧಾನ ಸಿಟಿ ಸಿವಿಲ್ ಕೋರ್ಟ್ ನಲ್ಲಿ ಈಗಾಗಲೇ ಕಡ್ಡಾಯ ತಡೆಯಾಜ್ಞೆ ಇದ್ದು ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿಗಳು, ಅವರ ಕುಟುಂಬ ಸದಸ್ಯರು ಹಾಗೂ ಧರ್ಮಸ್ಥಳಕ್ಕೆ ಸಂಭಂಧಿಸಿದ ಯಾವುದೇ ಸಂಸ್ಥೆಗಳ ವಿರುದ್ಧ ಮಾನಹಾನಿ ಹೇಳಿಕೆಗಳು ಅಪಪ್ರಚಾರದ ವೀಡಿಯೋಗಳನ್ನ ಮಾಡದಂತೆ ಕೋರ್ಟ್ ತಡೆಯಾಜ್ಞೆ ನೀಡಿತ್ತು. ಜತೆಗೆ ಸಮೀರ್ ವೀಡಿಯೋವನ್ನು ಇತರ ಯೂಟ್ಯೂಬ್ ಚಾನೆಲ್ಗಳು ಕೂಡ ಶೇರ್ ಮಾಡಿಕೊಂಡಿದ್ದು, ಅವುಗಳನ್ನೂ ಕೂಡ ಡಿಲೀಟ್ ಮಾಡುವಂತೆ ಕೋರ್ಟ್ ಆದೇಶ ನೀಡಿದೆ. ಮಾನ್ಯ ಕೋರ್ಟ್ ಆದೇಶದ ನಂತರವೂ ಸಮೀರ್ ಎಂಡಿ ಮತ್ತೊಂದು ವೀಡಿಯೋವನ್ನು ತನ್ನ ಯೂಟ್ಯೂಬ್ ಚಾನೆಲ್ಲಲ್ಲಿ ಅಪ್ಲೋಡ್ ಮಾಡಿದ್ದಾನೆ.
ಅಲ್ಲದೇ ಸಾಮಾಜಿಕ ಜಾಲತಾಣಗಳಾದ ಯೂಟ್ಯೂಬ್, ಫೇಸ್ ಬುಕ್, ಇನ್ಸ್ಟಾಗ್ರಾಂ ಸೇರಿದಂತೆ ಇತರ ಸಾಮಾಜಿಕ ಜಾಲತಾಣಗಳಿಗೆ ಶ್ರೀಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿಗಳು, ಅವರ ಕುಟುಂಬ ಸದಸ್ಯರು ಹಾಗೂ ಧರ್ಮಸ್ಥಳಕ್ಕೆ ಸಂಭಂಧಿಸಿದ ಸಂಸ್ಥೆಗಳ ವಿರುದ್ಧ ಅಪಪ್ರಚಾರ ಹಾಗೂ ಮಾನಹಾನಿ ಹೇಳಿಕೆಗಳಿರುವಂತ ಯಾವುದೇ ವರದಿ ಮತ್ತು ಅಂಶಗಳನ್ನ ಅಪ್ಲೋಡ್ ಮಾಡದಂತೆ ಆದೇಶ ಮಾಡಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಪರ ವಕೀಲ ಎಸ್ ರಾಜಶೇಖರ್ ಹಿಲಿಯಾರು ವಾದ ಮಂಡಿಸಿದ್ದರು.
BREAKING: ಮಗುವಿನ ಮೇಲೆ ವಿಕೃತಿ ಮೆರೆದ ‘ಅಂಗನವಾಡಿ ಸಹಾಯಕಿ ಸಸ್ಪೆಂಡ್’
ಷೇರು ಹೂಡಿಕೆದಾರರಿಗೆ ನೆಮ್ಮದಿಯ ಸುದ್ದಿ: ಸೆನ್ಸೆಕ್ಸ್ 500 ಅಂಕಗಳ ಏರಿಕೆ, 23,300 ಅಂಕಗಳ ಗಡಿ ದಾಟಿದ ನಿಫ್ಟಿ