ಬೆಂಗಳೂರು: ಕಾಂಗ್ರೆಸ್ ಪಕ್ಷದ ಟಿಕೆಟ್ ಗಾಗಿ ಅರ್ಜಿ ಸಲ್ಲಿಕೆ ಮುಂದುವರೆದಿದೆ. ಮುಂಬರುವಂತ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯೂ ಹೆಚ್ಚಾಗಿದೆ. ಈ ನಡುವೆ ಕಾಂಗ್ರೆಸ್ ಪಕ್ಷದಿಂದ ಶಿವಾಜಿನಗರ ಕ್ಷೇತ್ರದಿಂದ ಸ್ಪರ್ಧಿಸೋದಕ್ಕೆ ಟಿಕೆಟ್ ಗಾಗಿ ಮೊಹಮ್ಮದ್ ನಲಪಾಡ್ ಅರ್ಜಿ ಸಲ್ಲಿಸಿದ್ದಾರೆ.
BIGG NEWS: ಕಡೂರು ಕ್ಷೇತ್ರದ ಅಭಿವೃದ್ಧಿಗೆ 2,800 ಕೋಟಿ ಅನುದಾನ; ಸಿಎಂ ಬೊಮ್ಮಾಯಿ
ಇಂದು ಕೆಪಿಸಿಸಿ ಕಚೇರಿಗೆ ತೆರಳಿದಂತ ಕರ್ನಾಟಕ ಯೂತ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್, ಶಿವಾಜಿ ನಗರ ಕ್ಷೇತ್ರದಿಂದ ಮುಂಬರುವಂತ ಚುನಾವಣೆಗೆ ಸ್ಪರ್ಧೆ ಮಾಡೋದಕ್ಕೆ ಟಿಕೆಟ್ ಗಾಗಿ ಅರ್ಜಿಯನ್ನು ಸಲ್ಲಿಸಿದರು.
ಅಂದಹಾಗೇ ಶಿವಾಜಿನಗರದ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿ ರಿಜ್ವಾನ್ ಅರ್ಷದ್ ಇದ್ದಾರೆ. ಹೀಗಿದ್ದೂ ಮುಂದಿನ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಮೊಹಮ್ಮದ್ ನಲಪಾಡ್ ಸ್ಪರ್ಧಿಸೋದಕ್ಕೆ ಅರ್ಜಿ ಸಲ್ಲಿಸಿದ್ದು ತೀವ್ರ ಕುತೂಹಲ ಮೂಡಿಸಿದೆ.
ಜನಸಂಕಲ್ಪ ಯಾತ್ರೆ ಮೂಲಕ ಬಿಜೆಪಿ ಪರ ಜನಶಕ್ತಿ ಸಾಬೀತು – ಸಿಎಂ ಬಸವರಾಜ ಬೊಮ್ಮಾಯಿ
ಮತ್ತೊಂದೆಡೆ ಯಶವಂತಪುರ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಟಿಕೆಟ್ ಗಾಗಿ ನಟಿ ಭಾವನಾ ಕೂಡ ಇಂದು ಅರ್ಜಿಯನ್ನು ಸಲ್ಲಿಸಿದ್ದಾರೆ.