ಮೈಸೂರು : ರಾಜ್ಯ ರೈತರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಜಂಟಿ ಸಮೀಕ್ಷೆ ಬಳಿಕ ಅತಿವೃಷ್ಟಿಯಿ೦ದ ಬೆಳೆ ಕಳೆದುಕೊ೦ಡವರ ಖಾತೆಗೆ ಹಣ ವರ್ಗಾವಣೆ ಆಗಲಿದೆ ಎಂದು ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿ,ಕೃಷಿ-ತೋಟಗಾರಿಕೆ-ನೀರಾವರಿ ಇಲಾಖೆಗಳ ಅಧಿಕಾರಿಗಳು ಜಂಟಿ ಸಭೆ ಮಾಡಿ ರೈತರಿಗೆ ನೀರಿನ ನಿರ್ವಹಣೆ ಮತ್ತು ವೈಜ್ಞಾನಿಕ ಬಿತ್ತನೆ ಬಗ್ಗೆ ಹಾಗೂ ಇಳುವರಿ ಹೆಚ್ಚಿಗೆ ಬರುವ ಹೊಸ ಹೊಸ ತಳಿಗಳ ಬಗ್ಗೆ ರೈತರಿಗೆ ಮಾಹಿತಿ ನೀಡಬೇಕು. ಜಂಟಿ ಸಭೆಗಳನ್ನು ನಡೆಸಬೇಕು ಎ೦ದು ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.
ಹುರುಳಿ, ಮುಸುಕಿನ ಜೋಳ ಬಿತ್ತನೆ ಇನ್ನೂ ಆಗಬೇಕಿದೆ. ಕೆಲವು ರೈತರು ಬೆಳೆಯನ್ನು ಬದಲಾಯಿಸಿದ್ದಾರೆ. ಗೊಬ್ಬರ, ಬೀಜ ನಮ್ಮಲ್ಲಿ ಸ೦ಗ್ರಹ ಇದೆ. ರೈತರಿಗೆ ಅಗತ್ಯಕ್ಕಿಂತ ಹೆಚ್ಚು ಗೊಬ್ಬರವನ್ನೂ ದಾಸ್ತಾನು ಮಾಡಿಟ್ಟುಕೊ೦ಡಿದ್ದೇವೆ. ಯೂರಿಯಾ ಅಗತ್ಯ ಇರುವುದಕ್ಕಿಂತ ಹೆಚ್ಚು ಸ೦ಗ್ರಹವಿದೆ.
ಕುರಿಗಾಹಿಗಳಿಗೆ ಆಗುತ್ತಿದ್ದ ತೊಂದರೆಗಳು ಮತ್ತು ಕಳ್ಳ ಕಾಕರಿಂದ ರಕ್ಷಣೆ ಕೊಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದ್ದರಿ೦ದ ಜಿಲ್ಲೆಯಲ್ಲಿ ಕುರಿಗಾಹಿಗಳ ಮೇಲೆ ದೌರ್ಜನ್ಯ ಪ್ರಕರಣಗಳು ನಡೆದಿಲ್ಲ ಎನ್ನುವ ವರದಿಯನ್ನು ಅಧಿಕಾರಿಗಳು ಸಭೆಗೆ ನೀಡಿದ್ದಾರೆ.
ಹಾಲಿನ ಉತ್ಪಾದನೆ ಜಿಲ್ಲೆಯಲ್ಲಿ ದಿನೇ ದಿನೇ ಹೆಚ್ಚಾಗುತ್ತಿದ್ದು, ಉತ್ಪಾದನೆ ಹೆಚ್ಚಾದ ಹಾಗೆ ಮಾರುಕಟ್ಟೆ ವಿಸ್ತರಿಸಲು ಸಿದ್ಧತೆ ಮಾಡಿಕೊಳ್ಳಿ ಎನ್ನುವ ಸೂಚನೆಯನ್ನು ಅಧಿಕಾರಿಗಳಿಗೆ ನೀಡಿದ್ದೇನೆ.
ಹುಲಿ-ಆನೆಗಳು ಅರಣ್ಯದಿಂದ ಹೊರಗೆ ಬರಲು ಏನು ಕಾರಣ? ವೈಜ್ಞಾನಿಕ ಕಾರಣ ನೀಡಿ. ವೈಜ್ಞಾನಿಕ ಮಾರ್ಗದಲ್ಲಿ ಪರಿಣಾಮಕಾರಿ ಪರಿಹಾರ ಕ೦ಡು ಹಿಡಿಯುವ ತುರ್ತು ಇದೆ ಎ೦ದು ಅಧಿಕಾರಿಗಳಿಗೆ ತಿಳಿಸಿ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.
ಇಂದು ಮೈಸೂರಿನ ನಿವಾಸದಲ್ಲಿ ಸೋಮವಾರ ನಡೆದ ಕೆಡಿಪಿ ಸಭೆಯ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದೆ.
ಪತ್ರಿಕಾಗೋಷ್ಠಿಯ ಮುಖ್ಯಾಂಶಗಳು ಹೀಗಿವೆ.. #KDPMeeting #Mysuru pic.twitter.com/znhXm61Xca
— Siddaramaiah (@siddaramaiah) November 11, 2025








