ಚಿಕ್ಕಮಗಳೂರು: ರಾಜ್ಯದಲ್ಲಿ ಮತ್ತೆ ಮಂಗನ ಕಾಯಿಲೆ ಆರ್ಭಟಿಸುತ್ತಿದೆ. ಜೊತೆ ಜೊತೆಗೆ ಜನರಲ್ಲಿ ಆತಂಕಕ್ಕೂ ಕಾರಣವಾಗಿದೆ. ಕಾಫಿನಾಡು ಚಿಕ್ಕಮಗಳೂರಲ್ಲಿ ಇಂದು ಒಂದೇ ದಿನ ನಾಲ್ವರಿಗೆ ಮಂಗನ ಕಾಯಿಲೆ ದೃಢಪಟ್ಟಿದೆ.
ಈ ಕುರಿತಂತೆ ಜಿಲ್ಲಾ ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಿದ್ದು, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಹಾಗೂ ಎನ್ ಆರ್ ಪುರ ವ್ಯಾಪ್ತಿಯಲ್ಲಿ ಇಂದು ನಾಲ್ವರಿಗೆ ಮಂಗನಕಾಯಿಲೆ ದೃಢಪಟ್ಟಿರುವುದಾಗಿ ತಿಳಿಸಿದೆ.
ಮಂಗನಕಾಯಿಲೆಯಿಂದ ಬಳಲುತ್ತಿರುವಂತ ಜನರಿಗೆ ಕೊಪ್ಪದ ಸರ್ಕಾರಿ ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್ ತೆರೆದು, ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಮಂಗನಕಾಯಿಲೆಗೆ ಒಳಗಾದವರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ.
ಇನ್ನೂ ಮಂಗನ ಕಾಯಿಲೆ ಹೆಚ್ಚಾಗಿರುವ ಕಾರಣ, ಜನರಿಗೆ ಕಾಡಿಗೆ ಹೋಗದಂತೆ ಆರೋಗ್ಯ ಇಲಾಖೆ ಸೂಚಿಸಿದೆ. ಜೊತೆಗೆ ಮಂಗನ ಕಾಯಿಲೆ ತಡೆಯ ಸಂಬಂಧ ಜನರ ರಕ್ತದ ಮಾದರಿಯನ್ನು ಸಂಗ್ರಹಿಸಿ, ಪರೀಕ್ಷೆಗೆ ಕಳುಹಿಸಲಾಗಿದೆ.
ಜಾತಿ-ಆದಾಯ ಪ್ರಮಾಣ ಪತ್ರ, ವಾಸಸ್ಥಳ ದೃಢೀಕರಣ ಪತ್ರ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್
KNN Special Story: ಭಾರತದ ಮೊದಲ ‘ವರ್ಟಿಕಲ್ ಲಿಫ್ಟಿಂಗ್ ಸೇತುವೆ’ ಉದ್ಘಾಟನೆಗೆ ಸಿದ್ಧ: ಹೀಗಿದೆ ವಿಶೇಷತೆ