ಬೆಂಗಳೂರು: ರಾಜ್ಯದಲ್ಲಿ ಮಂಕಿಪಾಕ್ಸ್ ಸೋಂಕಿನ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ ಆರೋಗ್ಯ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸೋಂಕಿನ ಕುರಿತು ಚರ್ಚೆ ನಡೆಸಲಿದ್ದು, ಇದರ ಬಗ್ಗೆ ಮಾಹಿತಿ ಪಡೆಯಲಿದ್ದೇನೆ. ನಂತರ ಮುಂದಿನ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.