ಬೆಂಗಳೂರು: ಮುಂಗಾರುಮಳೆ 2024ರಲ್ಲಿ ದೇಶಾದ್ಯಂತ ದೀರ್ಘವಧಿಯ ಸರಾಸರಿ ಮಳೆ 106ರಷ್ಟು ವಾಡಿಕೆಗಿಂತ ಹೆಚ್ಚು ಬರಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಹವಾಮಾನ ಇಲಾಖೆಯು ಜೂನ್ ನಿಂದ ಸೆಪ್ಟೆಂಬರ್ ಅವಧಿಯಲ್ಲಿ ದೇಶಾದ್ಯಂತ 2024ರ ಮುಂಗಾರು ದೀರ್ಘಾವಧಿ ಸರಾಸರಿ ಮಳೆ ಪ್ರಮಾಣ ಶೇ.5ರಷ್ಟು ವ್ಯತ್ಯಯದೊಂದಿಗೆ ಶೇ.106ರಷ್ಟು ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದೆ.
ಮುಂಗಾರೂ ಮಳೆ ಮುನ್ಸೂಚನೆ ಅನ್ವಯ ದೇಶಾದ್ಯಂತ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಒಟ್ಟಾರೆಯಾಗಿ ದೇಶಾದ್ಯಂತ ಕಾಲೋಚಿತ ಮಳೆಯ ಐದು ವರ್ಗದ ಸಂಭವನೀಯತೆಯ ಮುನ್ಸೂಚನೆಗಳು ನೈರುತ್ಯ ಮಾನ್ಸೂನ್ ಕಾಲೋಚಿತ ಮಳೆಯ ಹೆಚ್ಚಿನ ಸಂಭವನೀಯತೆ ಸಾಮಾನ್ಯಕ್ಕಿಂತ 104ರಷ್ಟು ಹೆಚ್ಚಿದೆ ಎಂದು ಮಾಹಿತಿ ನೀಡಿದೆ.
ಎಲೆಕ್ಟ್ರಿಕ್ ವಾಹನಗಳ ಬೇಡಿಕೆ ಕುಸಿತ ; 14,000ಕ್ಕೂ ಹೆಚ್ಚು ಉದ್ಯೋಗಿಗಳ ವಜಾಕ್ಕೆ ಮುಂದಾದ ‘ಟೆಸ್ಲಾ’
BREAKING: ‘ಸಂಸದ ತೇಜಸ್ವಿ ಸೂರ್ಯ’ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ‘ಚುನಾವಣಾ ಆಯೋಗ’ಕ್ಕೆ ದೂರು