ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮೊರಾರ್ಜಿ ದೇಸಾಯಿ ಸೇರಿದಂತೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯ ಇನ್ನಿತರ ವಸತಿ ಶಾಲೆಗಳ 6 ನೇ ತರಗತಿ ಪ್ರವೇಶಕ್ಕೆ ನಡೆಸಿದ್ದ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ.
ಮಕ್ಕಳ ಜಿಲ್ಲಾವಾರು ರ್ಯಾಂಕ್ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದ್ದು, ಪೋಷಕರು ತಮ್ಮ ಮಕ್ಕಳ ಲಾಗಿನ್ ಮೂಲಕ ಫಲಿತಾಂಶವನ್ನು ವೀಕ್ಷಿಸಬಹುದು.
ಇನ್ನು ಸಮಾಜ ಕಲ್ಯಾಣ ಇಲಾಖೆ ಸೀಟ್ ಮೆಟ್ರಿಕ್ಸ್ ವಿವರಗಳನ್ನು ಸಲ್ಲಿಸಿದ ನಂತರ ವಸತಿ ಶಾಲೆವಾರು ಸೀಟು ಹಂಚಿಕೆ ಪ್ರಕ್ರಿಯೆ ಮಾಡಲಾಗುತ್ತದೆ.