ಹಾವೇರಿ :ಈಗಾಗಲೇ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿರುವ ಮಾಜಿ ಸಿಎಂ ಜಗದೀಶ ಶೆಟ್ಟರ್, ಹಾಗೂ ಕೆ ಆರ್ ಪಿ ಪಿ ಶಾಸಕ ರೆಡ್ಡಿ ಕೂಡ ಬಿಜೆಪಿಗೆ ಬೆಂಬಲವನ್ನು ಸೂಚಿಸಿದ್ದಾರೆ ಇದರ ಬೆನ್ನಲ್ಲೆ, ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ನಿಂದ ಮತ್ತಷ್ಟು ನಾಯಕರು ಬಿಜೆಪಿಗೆ ಮರಳಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಮುಂಬರುವ ದಿನಗಳಲ್ಲಿ ಕಾಂಗ್ರೆಸ್‌ನಿಂದ ಮತ್ತಷ್ಟು ನಾಯಕರು ಬಿಜೆಪಿಗೆ ಬರಲಿದ್ದಾರೆ. ಕಾಂಗ್ರೆಸ್ ಗ್ಯಾರಂಟಿಗಿಂತ ಮೋದಿ ಗ್ಯಾರಂಟಿ ಶ್ರೇಷ್ಠವಾಗಿದೆ. ಹೀಗಾಗಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯ ದಲ್ಲಿ 28ಕ್ಕೆ 28 ಸ್ಥಾನಗಳಲ್ಲೂ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.
ಇಲ್ಲಿ ಪಕ್ಷದ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭ ದಲ್ಲಿ ಮಾತನಾಡಿ, ರಾಜ್ಯಾದ್ಯಂತ ನಾನು ಪ್ರವಾಸ ಮಾಡುತ್ತಿದ್ದು, ಪಕ್ಷದ ಕಾರ್ಯಕರ್ತರು ರಣೋತ್ಸಾಹದಲ್ಲಿದಾರೆ. ವಿಧಾನಸಭೆ ಚುನಾವಣೆಯಲ್ಲಿ ನಮಗೆ ಅನಿರೀಕ್ಷಿತ ಸೋಲಾಯಿತು. ಕಳೆದ ಏಳೆಂಟು ತಿಂಗಳಿಂದ ಕಾರ್ಯಕರ್ತರ ಉತ್ಸಾಹ ಕುಗ್ಗಿತ್ತು. ಆದರೆ, ಪಂಚ ರಾಜ್ಯಗಳ ಫಲಿ ತಾಂಶ ಇಡೀ ದೇಶದಲ್ಲಿ ಬಿಜೆಪಿ ಅಲೆ ಇರೋದನ್ನು ಸಾಬೀತುಪಡಿಸಿದೆ. ಹೀಗಾಗಿ, ರಾಜ್ಯದ 28 ಕ್ಷೇತ್ರಗಳಲ್ಲಿ ಬಿಜೆಪಿಯನ್ನುಗೆಲ್ಲಿಸಲುಕಾರ್ಯಕರ್ತರು ಶ್ರಮಿಸಬೇಕು. ಕೇಂದ್ರ ಸರ್ಕಾರದ ಯೋಜನೆಗಳನ್ನು ಮನೆಮನೆಗೆ ತಲುಪಿಸುವ ಕಾರ್ಯ ಮಾಡಬೇಕು ಎಂದು ಹೇಳಿದರು.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲದಿದ್ದರೆ ಗ್ಯಾರಂಟಿ ಬಂದ್ ಮಾಡುತ್ತೇವೆ ಎಂದು ಮಾಗಡಿಯ ಕಾಂಗ್ರೆಸ್ ಶಾಸಕಬಾಲಕೃಷ್ಣಹೇಳಿದ್ದಾರೆ. ಸಿಎಂ ತಮ್ಮ ಮನಸ್ಸಿನ ಮಾತನ್ನು ಮಾಗಡಿ ಶಾಸಕರ ಬಾಯಿಂದ ಹೇಳಿಸಿದ್ದಾರೆ. ಆ ದುಸ್ಸಾಹಸಕ್ಕೆ ಕೈ ಹಾಕಿದರೆ ನಿಮ್ಮ ಕಿವಿ ಹಿಂಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.ಬಡವರು ಬಡವರಾಗಿಯೇ ಇರಲು ಕಾಂಗ್ರೆಸ್ ಕಾರಣ. ಎಲ್ಲಿ ಬಡತನ ಇರುತ್ತದೆಯೋ ಅಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿಕ್ಕೆ ಸಾಧ್ಯ ಅಂತ ಕಾಂಗ್ರೆಸ್ಸಿನವರು ಬಲವಾಗಿ ನಂಬಿದ್ದಾರೆ ಎಂದು ಹೇಳಿದರು.