ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪು ಟ್ರ್ಯಾಕ್ಟರ್ 20 ಅಡಿ ಆಳಕ್ಕೆ ಉರುಳಿ ಬಿದ್ದ ಪರಿಣಾಮ 10ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿರುವಂತ ಘಟನೆ ಚಿಕ್ಕಮಗಳೂರಿನ ತೀರ್ಥಕೆರೆ ಬಳಿಯಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಸಮೀಪದ ತೀರ್ಥಕೆರೆ ಎಸ್ಟೇಟ್ ನಲ್ಲಿ ಅಸ್ಸಾಂ ಮೂಲಕ ಕಾರ್ಮಿಕರು ಕೂಲಿ ಕೆಲಸ ಮಾಡಿಕೊಂಡಿದ್ದರು. ಇಂದು ದಿನಸಿ ಖರೀದಿ ಟ್ರ್ಯಾಕ್ಟರ್ ನಲ್ಲಿ ಹಿಂದಿರುಗುತ್ತಿದ್ದಾಗ ಜಯಪುರದ ಬಳಿಯಲ್ಲಿ ಚಾಲಕನ ನಿಯಂತ್ರ ತಪ್ಪಿ 20 ಅಡಿ ಆಳಕ್ಕೆ ಉರುಳಿ ಬಿದ್ದಿದೆ. ಈ ಘಟನೆಯಲ್ಲಿ 10ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಜಯಪುರ ಹಾಗೂ ಕೊಪ್ಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘KSRTC’ಗೆ ಮುಂದುವರೆದ ಪ್ರಶಸ್ತಿಗಳ ಸರಮಾಲೆ: 7 ರಾಷ್ಟ್ರೀಯ, ವಿಶ್ವ ನಾವೀನ್ಯತೆ ಪ್ರಶಸ್ತಿ