ಹಾವೇರಿ : ಜಿಲ್ಲೆ ಶಿಗ್ಗಾಂವಿ ತಾಲೂಕಿನ ದುಂಡಶಿ ಗ್ರಾಮದ ವಿವೇಕಾನಂದ ಪ್ರೌಢಶಾಲೆಯಲ್ಲಿ ಹಾಲು ಸೇವಿಸಿ ಹನ್ನೆರಡಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ.
ವಿದ್ಯಾರ್ಥಿಗಳು ತಲೆನೋವು, ಸುಸ್ತು ಸೇರಿದಂತೆ ಅಲ್ಪಪ್ರಮಾಣದ ಆರೋಗ್ಯ ಸಮಸ್ಯೆ ಎದುರಿಸಿದ್ದಾರೆ.
ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.ಐದು ಮಕ್ಕಳಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಶಾಲೆಗೆ ಊಟದ ಜೊತೆಗೆ ಪೂರೈಕೆಯಾಗಿದ್ದ ಹಾಲು ಸೇವಿಸಿದ ನಂತರ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ತಾಲೂಕು ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ್ದಾರೆ.