ಬಳ್ಳಾರಿ: ಜಿಲ್ಲೆಯಲ್ಲಿ ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿಯಾಗಿ ಅಪಘಾತ ಸಂಬಂಧಿಸಿದೆ. ಈ ಅಪಘಾತದಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಕುರುಗೋಡು ತಾಲ್ಲೂಕಿನ ಕೋಳೂರು ಬಸ್ ನಿಲ್ದಾಣದಲ್ಲಿ ನಡೆದಿದೆ.
ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲ್ಲೂಕಿನ ಕೋಳೂರಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದೆ. ಕುರುಗೋಡಿನಿಂದ ಬಳ್ಳಾರಿಗೆ ತೆರಳುತ್ತಿದ್ದಂತ ಸರ್ಕಾರಿ ಬಸ್ ಒಂದು ಕೋಳೂರು ಬಸ್ ನಿಲ್ದಾಣದಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಬಸ್ ಡಿಕ್ಕಿಯಾದ ರಭಸಕ್ಕೆ ವಿದ್ಯುತ್ ಕಂಬ ಬಸ್ಸಿನ ಮೇಲೆ ಉರುಳಿ ಬಿದ್ದಿದೆ. ಆದರೆ ವಿದ್ಯುತ್ ಪೂರೈಕೆ ಇಲ್ಲ ಪರಿಣಾಮ ದೊಡ್ಡ ಅನಾಹುತವೊಂದು ತಪ್ಪಿದೆ. ಈ ಅಪಘಾತದಲ್ಲಿ 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅವರು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.