ಚಿತ್ರದುರ್ಗ: ಜಿಲ್ಲೆಯ ಭರಮಸಾಗರದಲ್ಲಿ ಮದುವೆ ಊಟ ಸೇವಿಸಿದಂತ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವಂತ ಘಟನೆ, ಇಂದು ನಡೆದಿದೆ.
BIGG NEWS : ನಾಳೆ ಕನ್ನಡದ ಹಿರಿಯ ನಟ ದ್ವಾರಕೀಶ್ ಗೆ ‘ಗೌರವ ಡಾಕ್ಟರೇಟ್’ ಪ್ರದಾನ
ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿನ ಕಲ್ಯಾಣ ಮಂಟಪದಲ್ಲಿ ಮದುವೆ ಊಟ ಸೇವಿಸಿದಂತ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಅವರನ್ನು ಕೂಡಲೇ ಭರಮಸಾಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.
ಕನ್ನಡದ ಕೀರ್ತಿಯನ್ನು ರಾಷ್ಟ್ರಮಟ್ಟಕ್ಕೆ ಕೊಂಡೊಯ್ದ ಪುಟ್ಟಣ್ಣ ಕಣಗಾಲ್ – ಡಾ.ಮಹೇಶ ಜೋಶಿ ಬಣ್ಣನೆ
ಮದುವೆ ಊಟ ಸೇವಿಸಿದ್ದರಿಂದ ಅಸ್ವಸ್ಥರಾಗಿದ್ದಂತ ಜನರು ಚಿಕಿತ್ಸೆ ಬಳಿಕ ಚೇತರಿಸಿಕೊಂಡಿರೋದಾಗಿ ತಿಳಿದು ಬಂದಿದೆ. ಮದುವೆ ಊಟವನ್ನು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿದ್ದಾರೆ. ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.