ವಿಜಯಪುರ: ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿದಂತ 30ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವಂತ ಘಟನೆ ನಡೆದಿದೆ.
ವಿಜಯಪುರ ಜಿಲ್ಲೆಯ ನಿಡಗುಂದಿ ತಾಲ್ಲೂಕಿನ ಬ್ಯಾಲಿಹಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿದಂತ 30ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಇವರಲ್ಲಿ 20ಕ್ಕೂ ಹೆಚ್ಚು ಜನರನ್ನು ಬಸವನಬಾಗೇವಾಡಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಕಲುಷಿತ ನೀರು ಸೇವಿಸಿದಂತ 10ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ವಿಜಯಪುರ, ಬಾಗಲಕೋಟೆಯ ಖಾಸಗಿ, ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಈ ವಿಷಯ ತಿಳಿದು ಬ್ಯಾಲಿಹಾಳ ಗ್ರಾಮಕ್ಕೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ, ನೀರಿನ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿದ್ದಾರೆ. ಅಲ್ಲದೇ ಗ್ರಾಮದಲ್ಲೇ ಮೊಕ್ಕಾಂ ಹೂಡಿದ್ದು, ಅಸ್ವಸ್ಥರಿಗೆ ಚಿಕಿತ್ಸೆ ನೀಡುವ ಕಾರ್ಯದಲ್ಲಿ ತೊಡಗಿದ್ದಾರೆ.
BREAKING: ಜಮೀನು ವಿವಾದಕ್ಕೆ ಕನಕಪುರದಲ್ಲಿ ಡೆಡ್ಲಿ ಅಟ್ಯಾಕ್: KSRTC ಬಸ್ ಗೆ ನುಗ್ಗಿ ಮಾರಣಾಂತಿಕ ಹಲ್ಲೆ
BREAKING: ರಾಜ್ಯದಲ್ಲಿ ನಾಗರ ಪಂಚಮಿ ಹಬ್ಬದಂದೆ ಘೋರ ದುರಂತ: ಭೀಕರ ಅಪಘಾತದಲ್ಲಿ ಅಣ್ಣ-ತಂಗಿ ಸ್ಥಳದಲ್ಲೇ ಸಾವು