ಮಂಡ್ಯ: ಜಿಲ್ಲೆಯ ಪಾಂಡವಪುರದ ಬಳಿಯಲ್ಲಿ ವ್ಯಕ್ತಿಯೊಬ್ಬರ ಶವಸಂಸ್ಕಾರಕ್ಕೆ ತೆರಳಿದ್ದಂತ ಜನರ ಮೇಲೆ ಹೆಜ್ಜೇನುಗಳು ದಾಳಿ ನಡೆಸಿದ್ದಾವೆ. ಈ ದಾಳಿಯಲ್ಲಿ 40ಕ್ಕೂ ಹೆಚ್ಚು ಮಂದಿ ಹೆಜ್ಜೇನುಗಳ ಖಡಿತಕ್ಕೆ ಒಳಗಾಗಿರೋದಾಗಿ ತಿಳಿದು ಬಂದಿದೆ.
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಹಾರೋಹಳ್ಳಿಯಲ್ಲಿ ಧರ್ಮರಾಜ್ ಎಂಬುವರು ಸಾವನ್ನಪ್ಪಿದ್ದರು. ಅವರ ಪಾರ್ಥೀವ ಶರೀರವನ್ನು ಸಂಸ್ಕಾರ ಮಾಡೋದಕ್ಕೆ ಗ್ರಾಮದ ಜನರು ಕೊಂಡೊಯ್ದಿದ್ದರು. ಈ ವೇಳೆ ಹೆಜ್ಜೇನುಗಳು ದಾಳಿ ನಡೆಸಿದ್ದಾವೆ.
‘ಯುಪಿಐ ವಹಿವಾಟಿ’ನಲ್ಲಿ ದಾಖಲೆ ; ಅಕ್ಟೋಬರ್’ನಲ್ಲಿ ಬರೋಬ್ಬರಿ ’12 ಲಕ್ಷ ಕೋಟಿ’ ಟ್ರಾನ್ಸಕ್ಷನ್
ಶವ ಸಂಸ್ಕಾರಕ್ಕೆ ಹಾರೋಹಳ್ಳಿಯ ಹಲವು ಜನರು ಸೇರಿದ್ದ ವೇಳೆಯಲ್ಲಿ ಹೆಜ್ಜೇನು ದಾಳಿ ನಡೆಸಿದ್ದರಿಂದಾಗಿ 40ಕ್ಕೂ ಹೆಚ್ಚು ಜನರು ಹೆಜ್ಜೇನುಗಳ ಕಡಿತಕ್ಕೆ ಒಳಗಾಗಿದ್ದಾರೆ. ಹೆಜ್ಜೇನು ಕಚ್ಚಿದ್ದರಿಂದ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.