ಬೆಳಗಾವಿ: ಇಲ್ಲಿನ ಚಿಕ್ಕೋಡಿಯ ಹಿರೆಕೋಡಿ ಗ್ರಾಮದಲ್ಲಿ ಇರುವಂತ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಇಂದು ಬೆಳಗ್ಗೆ ಉಪ್ಪಿಟ್ಟು ಸೇವಿಸಿದಂತ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಹಿರೆಕೋಡಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಬೆಳಗ್ಗೆ ಉಪ್ಪಿಟ್ಟು ತಿಂದು 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವಂತ ಘಟನೆ ನಡೆದಿದೆ. ಮಕ್ಕಳನ್ನು ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಈ ವಸತಿ ಶಾಲೆಯಲ್ಲಿ 400ಕ್ಕೂ ಹೆಚ್ಚು ಮಕ್ಕಳಿದ್ದಾರೆ. ಮೊರಾರ್ಜಿ ವಸತಿ ಶಾಲೆಯಲ್ಲಿ 6 ರಿಂದ ಪಿಯುಸಿವರೆಗೂ ವ್ಯಾಸಂಗ ಮಾಡುತ್ತಿದ್ದಾರೆ. ಇಂತಹ ವಸತಿ ಶಾಲೆಯಲ್ಲಿ ಆಹಾರ ಸೇವಿಸಿ ಅಸ್ವಸ್ಥರಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.
ಬಹುಮಹಡಿ ಕಟ್ಟಡಗಳಿಗೆ ಅಗ್ನಿಶಾಮಕ ಇಲಾಖೆಯಿಂದ ನಿರಾಕ್ಷೇಪಣಾ ಪತ್ರ: ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
300 ವರ್ಷಗಳ ನಂತರ ಮಾನವ ದೇಹದಲ್ಲಿ ಕ್ಯಾನ್ಸರ್ ಚಿಕಿತ್ಸೆಯನ್ನು ಬದಲಾಯಿಸಬಲ್ಲ ಹೊಸ ಅಂಗ ಪತ್ತೆ