ಬೆಳಗಾವಿ: ದೀಪಾವಳಿ ಸಂಭ್ರಮದಲ್ಲಿ ಇರಬೇಕಿದ್ದ ರಾಮದುರ್ಗ ತಾಲೂಕಿನ ಮುದೇನೂರಿ ಗ್ರಾಮದ ಜನ ಆಸ್ಪತ್ರೆಗಳಿಗೆ ಅಲೆದಾಡುತ್ತಿದ್ದಾರೆ. ಕಲುಷಿತ ನೀರು ಕುಡಿದು ಕಳೆದ 3 ದಿನಗಳಲ್ಲಿ ಗ್ರಾಮದ 50ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ.
BREAKING NEWS : ಬೆಳಗಾವಿ ಜಿಲ್ಲೆಯಲ್ಲೇ ಘೋರ ದುರಂತ : ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ 7 ವರ್ಷದ ಬಾಲಕ ಬಲಿ
ಅಸ್ವಸ್ಥಗೊಂಡ 50ಕ್ಕೂ ಹೆಚ್ಚು ಜನರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 5 ಮಂದಿಯ ಸ್ಥಿತಿ ಗಂಭೀರವಿದ್ದು ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
BREAKING NEWS : ಬೆಳಗಾವಿ ಜಿಲ್ಲೆಯಲ್ಲೇ ಘೋರ ದುರಂತ : ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ 7 ವರ್ಷದ ಬಾಲಕ ಬಲಿ
ಗ್ರಾಮದಲ್ಲಿ ಕುಡಿಯುವ ನೀರಿನ ಪೈಪ್ ಒಡೆದು ಚರಂಡಿ ನೀರು ಮಿಶ್ರಣವಾಗಿತ್ತು. ಇದನ್ನು ತಿಳಿದರೂ ಗ್ರಾಮ ಪಂಚಾಯಿತಿ ಸಿಬ್ಬಂದಿ ನಿರ್ಲಕ್ಷ್ಯವಹಿಸಿದಕ್ಕೆ ಅವಘಡ ಸಂಭವಿಸಿದೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ.
BREAKING NEWS : ಬೆಳಗಾವಿ ಜಿಲ್ಲೆಯಲ್ಲೇ ಘೋರ ದುರಂತ : ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ 7 ವರ್ಷದ ಬಾಲಕ ಬಲಿ
ಗ್ರಾಮಕ್ಕೆ ರಾಯದುರ್ಗ ಶಾಸಕ ಮಹದೇವಪ್ಪ ಯಾದವಾಡ ಭೇಟಿ ನೀಡಿದ್ದು, ಅಸ್ವಸ್ಥರಿಗೆ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.