Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

’10 ಮಿಲಿಯನ್ ಜನರನ್ನು ಉಳಿಸಿದ್ದಕ್ಕಾಗಿ ಪಾಕ್ ಪ್ರಧಾನಿ ಧನ್ಯವಾದ ಅರ್ಪಿಸಿದರು’: ಟ್ರಂಪ್

10/01/2026 11:30 AM
Village school success story Hangaravalli Government Hangaravalli Government Higher Primary School selected for national level in Delhiselected for national level in Delhi

ಹಳ್ಳಿ ಶಾಲೆ ಯಶೋಗಾಥೆ ದೆಹಲಿಗೆ ಹಂಗರವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ರಾಷ್ಟ್ರಮಟ್ಟಕ್ಕೆ ಆಯ್ಕೆ

10/01/2026 11:26 AM

ಇರಾನ್ ನಲ್ಲಿ ಒಂದೇ ದಿನದಲ್ಲಿ 22 ಪ್ರಾಂತ್ಯಗಳಲ್ಲಿ 116 ಪ್ರತಿಭಟನೆ | Iran violence

10/01/2026 11:21 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Good News: ರಾಜ್ಯದ 7 ಸಾವಿರಕ್ಕೂ ಹೆಚ್ಚು ಅಂಗನವಾಡಿಗಳ ಉನ್ನತೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
KARNATAKA

Good News: ರಾಜ್ಯದ 7 ಸಾವಿರಕ್ಕೂ ಹೆಚ್ಚು ಅಂಗನವಾಡಿಗಳ ಉನ್ನತೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

By kannadanewsnow0906/07/2024 6:59 PM

ಬಳ್ಳಾರಿ : ರಾಜ್ಯದಲ್ಲಿನ 7 ಸಾವಿರಕ್ಕೂ ಹೆಚ್ಚಿನ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಿಸಲಾಗುವುದಲ್ಲದೆ, ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ನುರಿತರಿಂದ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಹಿರಿಯ ನಾಗರಿಕರ ಹಾಗೂ ವಿಕಲಚೇತನರ ಸಬಲೀಕರಣ ಇಲಾಖೆ ಸಚಿವರಾದ ಲಕ್ಷ್ಮೀ ಆರ್. ಹೆಬ್ಬಾಳಕರ್ ಅವರು ಹೇಳಿದ್ದಾರೆ.

ಬಳ್ಳಾರಿ ನಗರದ ವಾಲ್ಮೀಕಿ ಸಮುದಾಯ ಭವನದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಹಿರಿಯ ನಾಗರಿಕರ ಹಾಗೂ ವಿಕಲಚೇತನರ ಸಬಲೀಕರಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ವಿವಿಧ ಪರಿಕರಗಳ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು.

ಅಂಗನವಾಡಿ ಉನ್ನತಿಕರಣದಿಂದ ಮಕ್ಕಳ ಸರ್ವತೋಮುಖ ಬೆಳವಣಿಗೆ, ತೂಕ, ಆರೋಗ್ಯ ಮತ್ತು ಗುಣಮಟ್ಟದ ಶಿಕ್ಷಣಕ್ಕೆ ಪೂರಕವಾಗುತ್ತದೆ ಎಂದು ತಿಳಿಸಿದರು.

ಗೌರವಧನ ಹೆಚ್ಚಳಕ್ಕೆ ಮುಖ್ಯಮಂತ್ರಿಗಳು ಅಸ್ತು

ರಾಜ್ಯದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚಿಸಲಾಗಿದ್ದು, ಮುಖ್ಯಮಂತ್ರಿಯವರು ತಾತ್ವಿಕ ಒಪ್ಪಿಗೆ ನೀಡಿದ್ದಾರೆ ಎಂದು ಹೇಳಿದರು.

ಕಳಪೆ ಆಹಾರ ಪೂರೈಕೆಯಾದಲ್ಲಿ ಗಮನಕ್ಕೆ ತನ್ನಿ

ಅಂಗನವಾಡಿ ಕೇಂದ್ರಗಳಿಗೆ ಪೂರೈಕೆಯಾಗುವ ಆಹಾರ ಸಾಮಗ್ರಿಗಳ ಗುಣಮಟ್ಟ ಕಾಯ್ದುಕೊಳ್ಳಬೇಕು. ಆಹಾರ ಸಾಮಾಗ್ರಿಗಳು ಕಳಪೆ ಇದ್ದಲ್ಲಿ ಅಥವಾ ಯಾವುದೇ ಲೋಪದೋಷ ಕಂಡುಬಂದಲ್ಲಿ ಗಮನಕ್ಕೆ ತರಬೇಕು. ಇಲ್ಲವಾದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಪತ್ರ ಬರೆಯಬೇಕು ಎಂದು ತಿಳಿಸಿದರು.

ಪ್ರತಿ ಮಹಿಳೆಯೂ ಮನೆಯ ಯಜಮಾನಿ

ರಾಜ್ಯ ಸರ್ಕಾರವು ಸರ್ವಸಮಾಜದ ಅಭಿವೃದ್ಧಿಗೆ ಬದ್ಧವಾಗಿದ್ದು, ಅದರಲ್ಲೂ ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣವಾಗುತ್ತಿದೆ. ಮುಖ್ಯವಾಗಿ ಗೃಹಲಕ್ಷ್ಮೀ ಯೋಜನೆಯಿಂದ ಪ್ರತಿ ಮಹಿಳೆಯು ಮನೆಯ ಯಜಮಾನಿಯಾಗಿದ್ದಾಳೆ. ಇದರ ಶ್ರೇಯಸ್ಸು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲ್ಲುತ್ತದೆ ಎಂದು ಅವರು ನುಡಿದರು.

ಬಳ್ಳಾರಿ ಡಿಸಿ ಬಗ್ಗೆ ಮೆಚ್ಚುಗೆ

ರಾಜ್ಯದಲ್ಲಿ ಪ್ರಥಮ ಬಾರಿಗೆ ಬಳ್ಳಾರಿ ಜಿಲ್ಲಾಡಳಿತದಿಂದ ಜಿಲ್ಲಾ ಖನಿಜ ಪ್ರತಿಷ್ಠಾನ ಯೋಜನೆಯ ಅಡಿಯಲ್ಲಿ ಜಿಲ್ಲೆಯಾದ್ಯಂತ ಅಂಗನವಾಡಿ ಕೇಂದ್ರಗಳಿಗೆ ರೆಫ್ರಿಜರೇಟರ್ ವಿತರಿಸಲಾಗುತ್ತಿದೆ. ಇದೊಂದು ಪ್ರಶಂಸನೀಯ ಕಾರ್ಯವಾಗಿದ್ದು, ಜಿಲ್ಲಾಧಿಕಾರಿಯವರಿಗೆ ಕೃತಜ್ಞತೆ ಸಲ್ಲಿಸಬೇಕು ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ನಂತರ ಸಚಿವರು, ಕಾರ್ಯಕ್ರಮದಲ್ಲಿ ಜಿಲ್ಲಾ ಖನಿಜ ಪ್ರತಿಷ್ಠಾನ ಯೋಜನೆಯಡಿ ಅಂಗನವಾಡಿ ಕೇಂದ್ರಗಳಿಗೆ ರೆಫ್ರಿಜರೇಟರ್ ಹಾಗೂ ವಿಕಲಚೇತನರ ತ್ರಿಚಕ್ರ ವಾಹನಗಳು ಮತ್ತು ಪೋಷಣ್ ಆಭಿಯಾನ ಯೋಜನೆಯಡಿ ಆಶಾ ಕಾರ್ಯಕರ್ತೆಯರಿಗೆ ಸ್ಮಾರ್ಟ್‍ಫೋನ್, ಅಂಗನವಾಡಿ ಕೇಂದ್ರಗಳಿಗೆ ತೂಕದ ಯಂತ್ರ, ಆಶಾ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಸೀರೆ ವಿತರಿಸಿದರು.

ಮುಖ್ಯಮಂತ್ರಿ ಬಾಲಸೇವಾ ಯೋಜನೆಯಡಿ ಕೊರೋನಾದಲ್ಲಿ ಮೃತಹೊಂದಿದ ಪಾಲಕರ ಮಕ್ಕಳಿಗೆ ಲ್ಯಾಪ್‍ಟಾಪ್, ವಿಶೇಷಚೇತನ ಮಕ್ಕಳಿಗೆ ಟಾಕಿಂಗ್ ಲ್ಯಾಪ್‍ಟಾಪ್, ಬ್ರೈಲ್‍ಕಿಟ್, ಹೊಲಿಗೆ ಯಂತ್ರ ನೀಡಲಾಯಿತು.

ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ಅಸಾಧಾರಣ ಸಾಧನೆಗೈದ 08 ಮಕ್ಕಳನ್ನು ಇದೇ ವೇಳೆ ಸನ್ಮಾನಿಸಲಾಯಿತು.

ಬೇಟಿ ಬಚಾವೋ -ಬೇಟಿ ಪಡಾವೋ ಯೋಜನೆಯಡಿ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಯರನ್ನು ಸನ್ಮಾನಿಸಿ ಅಭಿನಂದನಾ ಪತ್ರ ಮತ್ತು ಚೆಕ್ ವಿತರಿಸಲಾಯಿತು.

ಬಳ್ಳಾರಿ ನಗರ ಶಾಸಕ ನಾ.ರಾ ಭರತ್ ರೆಡ್ಡಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆ ಮೇಯರ್ ಮುಲ್ಲಂಗಿ ನಂದೀಶ್, ಉಪಮೇಯರ್ ಡಿ.ಸುಕುಂ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಚಿದಾನಂದಪ್ಪ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಂಟಿ ನಿರ್ದೇಶಕ ಬಿ.ಎಚ್. ನಿಶ್ಚಲ್, ಬಳ್ಳಾರಿ ಜಿಲ್ಲಾ ಉಪನಿರ್ದೇಶಕ ವಿಜಯ್‍ಕುಮಾರ್ ಮತ್ತಿತರರ ಅಧಿಕಾರಿಗಳು ಉಪಸ್ಥಿತರಿದ್ದರು.

ಅಸ್ಸಾಂ ಪ್ರವಾಹ ಪರಿಸ್ಥಿತಿ ಗಂಭೀರ, 30 ಜಿಲ್ಲೆಗಳಲ್ಲಿ 24.50 ಲಕ್ಷ ಜನರಿಗೆ ತೊಂದರೆ

BREAKING: ರಾಜ್ಯ ಸರ್ಕಾರದಿಂದ ‘ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ’ಗಳನ್ನು ನೇಮಿಸಿ ಆದೇಶ: ಇಲ್ಲಿದೆ ಪಟ್ಟಿ

Share. Facebook Twitter LinkedIn WhatsApp Email

Related Posts

Village school success story Hangaravalli Government Hangaravalli Government Higher Primary School selected for national level in Delhiselected for national level in Delhi

ಹಳ್ಳಿ ಶಾಲೆ ಯಶೋಗಾಥೆ ದೆಹಲಿಗೆ ಹಂಗರವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ರಾಷ್ಟ್ರಮಟ್ಟಕ್ಕೆ ಆಯ್ಕೆ

10/01/2026 11:26 AM3 Mins Read

ಮಾತು ತಪ್ಪಿದ ಮಗ ಯಶ್‌ ಹೊಸ ಸಿನಿಮಾ Toxic ವಿರುದ್ದ ದೂರು ದಾಖಲು

10/01/2026 11:17 AM1 Min Read

BREAKING : ‘ಟಾಕ್ಸಿಕ್’ ಸಿನೆಮಾಗೆ ಸಂಕಷ್ಟ : ಟೀಸರ್‌ನಲ್ಲಿ ಅಶ್ಲೀಲತೆ ಇದೆ ಎಂದು ಸೆನ್ಸಾರ್ ಬೋರ್ಡ್ ಗೆ ದೂರು ದಾಖಲು

10/01/2026 11:07 AM1 Min Read
Recent News

’10 ಮಿಲಿಯನ್ ಜನರನ್ನು ಉಳಿಸಿದ್ದಕ್ಕಾಗಿ ಪಾಕ್ ಪ್ರಧಾನಿ ಧನ್ಯವಾದ ಅರ್ಪಿಸಿದರು’: ಟ್ರಂಪ್

10/01/2026 11:30 AM
Village school success story Hangaravalli Government Hangaravalli Government Higher Primary School selected for national level in Delhiselected for national level in Delhi

ಹಳ್ಳಿ ಶಾಲೆ ಯಶೋಗಾಥೆ ದೆಹಲಿಗೆ ಹಂಗರವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ರಾಷ್ಟ್ರಮಟ್ಟಕ್ಕೆ ಆಯ್ಕೆ

10/01/2026 11:26 AM

ಇರಾನ್ ನಲ್ಲಿ ಒಂದೇ ದಿನದಲ್ಲಿ 22 ಪ್ರಾಂತ್ಯಗಳಲ್ಲಿ 116 ಪ್ರತಿಭಟನೆ | Iran violence

10/01/2026 11:21 AM

ಮಾತು ತಪ್ಪಿದ ಮಗ ಯಶ್‌ ಹೊಸ ಸಿನಿಮಾ Toxic ವಿರುದ್ದ ದೂರು ದಾಖಲು

10/01/2026 11:17 AM
State News
Village school success story Hangaravalli Government Hangaravalli Government Higher Primary School selected for national level in Delhiselected for national level in Delhi KARNATAKA

ಹಳ್ಳಿ ಶಾಲೆ ಯಶೋಗಾಥೆ ದೆಹಲಿಗೆ ಹಂಗರವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ರಾಷ್ಟ್ರಮಟ್ಟಕ್ಕೆ ಆಯ್ಕೆ

By kannadanewsnow0710/01/2026 11:26 AM KARNATAKA 3 Mins Read

ಚಿಕ್ಕಮಗಳೂರು: ಚಿಕ್ಕಮಗಳೂರು ತಾಲ್ಲೂಕಿನ ಹಂಗರವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯು ಯಶಸ್ವಿ ಮಾದರಿ ಶಾಲೆಗಳ ಉತ್ತಮ ಸಾಧನೆಗಾಗಿ ರಾಷ್ಟ್ರ ಮಟ್ಟಕ್ಕೆ…

ಮಾತು ತಪ್ಪಿದ ಮಗ ಯಶ್‌ ಹೊಸ ಸಿನಿಮಾ Toxic ವಿರುದ್ದ ದೂರು ದಾಖಲು

10/01/2026 11:17 AM

BREAKING : ‘ಟಾಕ್ಸಿಕ್’ ಸಿನೆಮಾಗೆ ಸಂಕಷ್ಟ : ಟೀಸರ್‌ನಲ್ಲಿ ಅಶ್ಲೀಲತೆ ಇದೆ ಎಂದು ಸೆನ್ಸಾರ್ ಬೋರ್ಡ್ ಗೆ ದೂರು ದಾಖಲು

10/01/2026 11:07 AM

BREAKING : ಬಳ್ಳಾರಿಯಲ್ಲಿ ಬ್ಯಾನರ್‌ ಗಲಾಟೆ ಪ್ರಕರಣ : ತನಿಖೆಯನ್ನು ‘CID’ಗೆ ವರ್ಗಾಯಿಸಿದ ರಾಜ್ಯ ಸರ್ಕಾರ

10/01/2026 10:44 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.