ಬೆಂಗಳೂರು : ಕಾಂಗ್ರೆಸ್ ನ ಹತ್ತಕ್ಕೂ ಅಧಿಕ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂದು ಸಚಿವ ಆರ್ ಅಶೋಕ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಅಶೋಕ್ ಕಾಂಗ್ರೆಸ್ ನ ಶಾಸಕರು ಮತ್ತು ನಾಯಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ. ಸದ್ಯದಲ್ಲೇ ಶಾಸಕರನ್ನು ತಮ್ಮ ಪಕ್ಷಕ್ಕೆ ಸೇಡೆ ಮಾಡಿಕೊಳ್ಳುತ್ತೇವೆ ಎಂದು ಅಶೋಕ್ ಹೇಳಿದರು.
ಕಾಂಗ್ರೆಸ್ ನಾಯಕರಿಗೆ ಈಗ ಭಯ ಶುರುವಾಗಿದೆ. ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು, ಆ ಪಕ್ಷಕ್ಕೆ ಯಾರೂ ವಲಸೆ ಹೋಗುವುದಿಲ್ಲ ಎಂದು ಅಶೋಕ್ ಹೇಳಿದರು. ಕಾಂಗ್ರೆಸ್ ನ ಹತ್ತಕ್ಕೂ ಅಧಿಕ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂದು ಸಚಿವ ಆರ್ ಅಶೋಕ್ ಸ್ಪೋಟಕ ಹೇಳಿಕೆ ನೀಡಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ.
Rain in Bangalore: ಚಳಿಯಿಂದ ತತ್ತರಿಸಿರುವ ಬೆಂಗಳೂರು ಜನತೆಗೆ ಮತ್ತೊಂದು ಶಾಕ್: ಇನ್ನೂ ಮೂರು ದಿನ ಮಳೆ