ಬೆಂಗಳೂರು : ಮಗಳ ಪ್ರೀತಿಯ ವಿಚಾರಕ್ಕೆ ಸಂಬಂಧಿಸಿದಂತೆ ತಾಯಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಪಟ್ಟಣದಲ್ಲಿ ನಡೆದಿದೆ.
ನೆಲಮಂಗಲದಲ್ಲಿ ವಾಸಿಸುತ್ತಿದ್ದ ಲಕ್ಷ್ಮಮ್ಮ ಎಂಬುವರ ಮಗಳು ವೀಣಾ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದಳು ಆದರೆ ತಾಯಿ ಲಕ್ಷ್ಮಮ್ಮ ತಮಗೆ ಇಷ್ಟ ಇಲ್ಲದ ಯುವಕನನ್ನು ಪ್ರೀತಿಸದಂತೆ ಮನವಿ ಮಾಡಿದ್ದಾರೆ. ಆದರೆ ಇದಕ್ಕೆ ಮಗಳು ಒಪ್ಪದಿದ್ದಾಗ ಇದರಿಂದ ಮನನೊಂದು ಲಕ್ಷ್ಮಮ್ಮ ತಡರಾತ್ರಿ ನೇತಾಜಿ ಪಾರ್ಕ್ ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೆಲಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದೆ.